ರಸ್ತೆ, ಕುಡಿಯುವ ನೀರಿಗೆ ಆದ್ಯತೆ: ಶಾಸಕಿ ಕೆ.ಪೂರ್ಣಿಮಾ ಭರವಸೆ

HYR poornima 17
Published on

ಹಿರಿಯೂರು: ತಾಲೂಕಿನ ವಿವಿಧೆಡೆ ಸುಸಜ್ಜಿತ ರಸ್ತೆ ಮತ್ತು ಎಲ್ಲ ಗ್ರಾಮಗಳಿಗೂ ಶುದ್ಧ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಲಾಗಿದೆ ಎಂದು ಎಂದು ಶಾಸಕಿ ಕೆ.ಪೂರ್ಣಿಮಾ ಹೇಳಿದರು.

ತಾಲೂಕಿನ ಭೀಮನಬಂಡೆ, ಹೊಸಯಳನಾಡು, ನಾಗೇನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ 7 ಕೋಟಿ ರೂ. ವೆಚ್ಚದಲ್ಲಿ ರಸ್ತೆ ವಿಸ್ತರಣೆ ಹಾಗೂ ಡಾಂಬರ್ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಕಳೆದ ನಾಲ್ಕು ವರ್ಷದಿಂದ ತಾಲೂಕಿನ ಜನತೆಗೆ ಮೂಲಸೌಕರ್ಯ ಒದಗಿಸಲು ಒತ್ತು ನೀಡಿದ್ದು, ಸರ್ಕಾರದ ಅನುದಾನವನ್ನು ಅಭಿವೃದ್ಧಿ ಕಾರ್ಯಕ್ಕೆ ಸದ್ಬಳಕೆ ಮಾಡಿ, ಎಲ್ಲ ಸಮುದಾಯಗಳಿಗೂ ಸಾಮಾಜಿಕ ನ್ಯಾಯ ಕಲ್ಪಿಸಲಾಗಿದೆ ಎಂದು ಹೇಳಿದರು.

ಗ್ರಾಪಂ ಅಧ್ಯಕ್ಷ ಶ್ರೀನಿವಾಸ್, ದೇವರಾಜ್, ಕೀರ್ತಿ ಪ್ರಕಾಶ್, ಕಸವನಹಳ್ಳಿ ರಮೇಶ್, ನಾಗಣ್ಣ, ಜಗದೀಶ್, ದಿನೇಶ್, ಮೂರ್ತಿ ಯಶವಂತ, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ರಾಮಚಂದ್ರಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net