ನಂಜೇಗೌಡನದೊಡ್ಡಿ ಗ್ರಾಮದಲ್ಲಿ ರಸ್ತೆ ಒತ್ತುವರಿ ತೆರವು

6hgr1
Published on

ಹಲಗೂರು: ಸಮೀಪದ ನಂಜೇಗೌಡನದೊಡ್ಡಿ ಗ್ರಾಮದ ಸರ್ವೇ ನಂ.41, 42, 43, 44ರಲ್ಲಿ ಖಾಸಗಿ ವ್ಯಕ್ತಿ ಗಳು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ ರಸ್ತೆಯನ್ನು ಕಂದಾಯ ಇಲಾಖೆ ಅಧಿಕಾರಿಗಳು ಶನಿವಾರ ಪೊಲೀಸ್ ಬಿಗಿ ಭದ್ರತೆಯಲ್ಲಿ ತೆರವು ಗೊಳಿಸಿದರು.

ಗ್ರಾಮದಲ್ಲಿನ ಸಾರ್ವಜನಿಕ ರಸ್ತೆಯನ್ನು ಕೆಲವು ಖಾಸಗಿ ವ್ಯಕ್ತಿಗಳು ರಸ್ತೆಯನ್ನು ಒತ್ತುವರಿ ಮಾಡಿಕೊಂಡಿದ್ದರು. ಇದರಿಂದಾಗಿ ನೆರೆಹೊರೆಯ ಜಮೀನುಗಳಿಗೆ ಹೋಗಲು ತೊಂದರೆ ಆಗುತ್ತಿದೆ. ರೈತರು, ಸಾರ್ವಜನಿಕರು ಮತ್ತು ವಾಹನಗಳು ಸುಗಮವಾಗಿ ಸಂಚರಿಸಲು ಅನುಕೂಲ ಆಗುವಂತೆ ರಸ್ತೆ ತೆರವು ಮಾಡಿ ಕೊಡಬೇಕು ಎಂದು ನಂಜೇಗೌಡನದೊಡ್ಡಿ ಗ್ರಾಮದ ಶಂಭು ಎಂಬುವರು ಮಳವಳ್ಳಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದ್ದರು.

ಈ ಸಂಬಂಧ ಉನ್ನತ ಅಧಿಕಾರಿಗಳ ಅದೇಶದ ಮೇರೆಗೆ ಕಸಬಾ 2ನೇ ವೃತ್ತದ ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ರವಿಕುಮಾರ್ ಮತ್ತು ಸಿಬ್ಬಂದಿ ನೇತೃತ್ವದಲ್ಲಿ ತಾಲೂಕು ಸರ್ವೇಯರ್ ಎಂ.ಎಸ್.ಬೀರೇಶ್ ಸ್ಥಳಕ್ಕೆ ಆಗಮಿಸಿ ಸಂಬಂಧಿಸಿದ ರಸ್ತೆಯ ಜಾಗವನ್ನು ಗುರುತಿಸಿದರು. ಹಲಗೂರು ಪೊಲೀಸ್ ಠಾಣೆಯ ಎಎಸ್‌ಐ ಶಿವಣ್ಣ ನೇತೃತ್ವದಲ್ಲಿ ಬಿಗಿ ಭದ್ರತೆಯಲ್ಲಿ ಒತ್ತುವರಿ ಜಾಗವನ್ನು ತೆರವುಗೊಳಿಸಲಾಯಿತು.

ಈ ಸಂದರ್ಭದಲ್ಲಿ ರಾಜಸ್ವ ನಿರೀಕ್ಷಕ ರವಿಕುಮಾರ್, ಗ್ರಾಮ ಲೆಕ್ಕಿಗರಾದ ಸುದರ್ಶನ್, ಎಎಸ್‌ಐ ಶಿವಣ್ಣ, ಅರ್ಜಿದಾರ ಶಂಭು, ಪೇದೆ ಚಂದ್ರಕಾಂತ್, ಕಂದಾಯ ಇಲಾಖೆಯ ಸುಭಾಷ್ ಭರಣಿ, ಗ್ರಾಮಸ್ಥರಾದ ಶಿವಸ್ವಾಮಿ, ಮಹದೇವಸ್ವಾಮಿ, ಪ್ರಭು, ಮುತ್ತಯ್ಯ, ಬಾಲಸುಂದರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net