ಗುಂಡಿ ಮುಚ್ಚುವ ಕಾರ್ಯಕ್ಕೆ ಚಾಲನೆ

dj hyr cmc
Published on

ಹಿರಿಯೂರು: ನಗರದ ವಿವಿಧೆಡೆ ರಸ್ತೆ ಗುಂಡಿ ಮುಚ್ಚುವ ಕಾರ್ಯಕ್ಕೆ ನಗರಸಭೆ ತಾತ್ಕಾಲಿಕ ಕ್ರಮ ಕೈಗೊಂಡಿದೆ.

ಆದರೆ, ಹತ್ತಾರು ವರ್ಷದಿಂದ ರಸ್ತೆ ವಿಸ್ತರಣೆ ಕಾರ್ಯ ಕೈಗೆತ್ತಿಕೊಳ್ಳುವ ಇಚ್ಛಾಶಕ್ತಿ ಪ್ರದರ್ಶಿಸುತ್ತಿಲ್ಲ ಎಂಬುದು ಸಾರ್ವಜನಿಕರ ಆರೋಪ.

ಗುರುವಾರ ರಸ್ತೆಗಳಲ್ಲಿನ ಗುಂಡಿ ಮುಚ್ಚುವ ಕಾರ್ಯ ಕೈಗೊಳ್ಳುತ್ತಿದ್ದಂತೆ, ಅನೇಕರು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.

ಇಂತಹ ತಾತ್ಕಾಲಿಕ ಕಾರ್ಯಗಳಿಂದ ನಗರಸಭೆಗೆ ಆರ್ಥಿಕ ಹೊರೆಯೇ ಹೊರತು, ಜನರ ಸಮಸ್ಯೆಗೆ ಪರಿಹಾರವಲ್ಲ ಎಂದು ಜನರ ಒತ್ತಾಸೆ.

ರಸ್ತೆ ವಿಸ್ತರಣೆಗೆ ನೀಡಿದರೆ ಮಾತ್ರ ಸಂಚಾರ ದಟ್ಟಣೆ ನಿಯಂತ್ರಣ, ಸುಗಮ ಸಂಚಾರಕ್ಕೆ ಅನುಕೂಲವಾಗಲಿದ್ದು, ಸ್ಥಳೀಯ ಆಡಳಿತ-ಜನ ಪ್ರತಿನಿಧಿಗಳು ಎಚ್ಚೆತ್ತುಕೊಳ್ಳಬೇಕಿದೆ ಎಂಬುದು ಜನರ ಆಗ್ರಹ.

ವೇದಾವತಿ ಸೇತುವೆ, ತಾಲೂಕು ಕಚೇರಿ, ಗಾಂಧಿ ವೃತ್ತದ ರಸ್ತೆಯಲ್ಲಿ ಗುಂಡಿ ಬಿದ್ದಿದ್ದು, ಲಾರಿ, ಬಸ್, ದ್ವಿಚಕ್ರ ವಾಹನಗಳ ಸಂಚಾರ ದಟ್ಟಣೆಯಿಂದ, ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ಪಾದಚಾರಿಗಳು ಪರದಾಡುವಂತಾಗಿದೆ.

ನಾಗರಿಕರ ಆಕ್ರೋಶಕ್ಕೆ ಮಣಿದ ನಗರಸಭೆ ತಾತ್ಕಾಲಿಕವಾಗಿ ರಸ್ತೆ ಗುಂಡಿ ಮುಚ್ಚಲು ಮುಂದಾಗಿದೆ. ಆದರೆ, ರಸ್ತೆ ಅಭಿವೃದ್ಧಿ, ವಿಸ್ತರಣೆ ಮಾತ್ರ ಶಾಶ್ವತ ಪರಿಹಾರ. ಈ ನಿಟ್ಟಿನಲ್ಲಿ ನಗರಸಭೆ ಆಡಳಿತ ಮುಂದಾಗಬೇಕು ಎಂಬುದು ಜನರ ಒತ್ತಾಯ.

ನಗರದ ಹುಳಿಯಾರು ರಸ್ತೆ ವಿಸ್ತರಣೆ ದಶಕದಿಂದ ನನೆಗುದಿಗೆ ಬಿದ್ದಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಆದ್ಯತೆ ಮೇರೆಗೆ ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕಿದೆ ಎಂಬುದು ಜನರ ಒತ್ತಾಸೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net