

ಕೊಕಟನೂರ: ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಚರಂಡಿ ತುಂಬಿ ಕೊಳಚೆ ನೀರು ರಸ್ತೆ ಮೇಲೆ ಹರಿಯುತ್ತಿರುವ ಪರಿಣಾಮ ಸ್ಥಳೀಯ ನಿವಾಸಿಗಳು ನಿತ್ಯ ಸಮಸ್ಯೆ ಅನುಭವಿಸುವಂತಾಗಿದೆ. ಈ ಬಡಾವಣೆಯಲ್ಲಿ 150 ಮನೆಗಳಿದ್ದು, ಸುಮಾರು 600 ಜನ ವಾಸಿಸುತ್ತಿದ್ದಾರೆ. ಕಳೆದ ಒಂದು ತಿಂಗಳಿಂದ ಬಡವಾಣೆಯಲ್ಲಿ ಸಮಸ್ಯೆಯಾಗಿದ್ದರೂ ಗ್ರಾಪಂ ಸಿಬ್ಬಂದಿ ಅಗತ್ಯ ಸ್ವಚ್ಛತೆ ಕಾರ್ಯಕ್ಕೆ ಮುಂದಾಗದೇ ನಿರ್ಲಕ್ಷೃ ವಹಿಸುತ್ತಿದ್ದಾರೆ.
ಚರಂಡಿ ನೀರು ಸಂಗ್ರಹವಾಗಿರುವುದರಿಂದ ಸೊಳ್ಳೆಗಳ ಕಾಟ ಹೆಚ್ಚಾಗಿದೆ.
ಹಿಂದಿನ ಪಿಡಿಒ ವರ್ಗಾವಣೆಯಾಗಿದ್ದು, ನೂತನ ಪಿಡಿಒಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.| ರವೀಂದ್ರ ಬಂಗಾರೆಪ್ಪನವರ ತಾಪಂ ಇಒ