ರಸ್ತೆ ಮೇಲೆಯೇ ಚರಂಡಿ ನೀರು

1
Published on

ಅಥಣಿ ಗ್ರಾಮೀಣ: ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ಕೊಳಚೆ ನೀರು ರಸ್ತೆ ಮಧ್ಯೆ ಹರಿಯುತ್ತಿದ್ದು, ಸ್ಥಳೀಯ ನಿವಾಸಿಗಳಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ.

ಗ್ರಾಮದ ಬಹುಪಾಲು ಬಡಾವಣೆಗಳಲ್ಲಿ ಸಿ.ಸಿ ರಸ್ತೆಗಳಿದ್ದು, ಸೂಕ್ತ ಚರಂಡಿ ನಿರ್ಮಿಸಿಲ್ಲ. ಪರಿಣಾಮ ಎಲ್ಲರ ಮನೆಯ ಎದುರು ಕೊಳಚೆ ನೀರು ರಸ್ತೆಯಲ್ಲೇ ನಿಂತು ಕೊಳಚೆ ಪ್ರದೇಶವಾಗಿ ಮಾರ್ಪಡಾಗಿದೆ. ಚರಂಡಿ ನೀರು ಸಂಗ್ರಹಗೊಂಡು ದುರ್ವಾಸನೆ ಬೀರುತ್ತಿದ್ದು, ಸದಾ ಮನೆಯ ಬಾಗಿಲು ಮುಚ್ಚಿಕೊಂಡಿರಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಚರಂಡಿಯ ಕೊಳಚೆ ನೀರಿನಿಂದ ಸೊಳ್ಳೆ ಕಾಟ ಹೆಚ್ಚಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ರೋಗದ ಭೀತಿ ಎದುರಾಗಿದೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ಸ್ಥಳೀಯ ಗ್ರಾಪಂ ಅಧಿಕಾರಿ, ಅಧ್ಯಕ್ಷೆ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net