

ಬೆಂಗಳೂರು:ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನೀಡಿರುವ ಗುಡುವುನೊಳಗೆ ನಗರಾದ್ಯಂತ ರಸ್ತೆಗುಂಡಿ ಮುಚ್ಚುವ ಕಾರ್ಯ ಭರದಿಂದ ಸಾಗಿದೆ. ರಜಾ ದಿನಗಳಲ್ಲೂ ಅಧಿಕಾರಿಗಳು ರಸ್ತೆಗುಂಡಿ ಮುಚ್ಚುವ ಬಗ್ಗೆ ಮೇಲ್ವಿಚಾರಣೆ ನಡೆಸಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದ್ದಾರೆ.
ಯಲಹಂಕ ವಲಯದ ಸಹಕಾರ ನಗರದ 20ನೇ ಕ್ರಾಸ್ನಲ್ಲಿ ಶನಿವಾರ ರಸ್ತೆ ಗುಂಡಿ ಮುಚ್ಚುವ ಕಾರ್ಯವನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ನಗರದಲ್ಲಿ ನಿರಂತರವಾಗಿ ರಸ್ತೆ ಗುಂಡಿ ಮುಚ್ಚಲಾಗುತ್ತಿದೆ. ಸರ್ಕಾರಿ ರಜೆದಿನಗಳಲ್ಲೂ ವಲಯ ಆಯುಕ್ತರು, ಜಂಟಿ ಆಯುಕ್ತರು, ಇಂಜಿನಿಯರ್ಗಳು ರಸ್ತೆಗುಂಡಿ ಮುಚ್ಚುವ ಕಾರ್ಯದಲ್ಲಿ ತೊಡಗಲಿದ್ದಾರೆ. ಗುತ್ತಿಗೆದಾರರಿಂದ ಅಧಿಕ ಹಾಟ್ ಮಿಕ್ಸ್ ಪಡೆದು ಹಗಲಿರುಳು ರಸ್ತೆಗುಂಡಿ ಮುಚ್ಚುವ ಕಾರ್ಯ ಮಾಡಲಾಗುತ್ತಿದೆ.ಶ್ರೀವಾಗಿ ಬಾಕಿಯಿರುವ ರಸ್ತೆ ಗುಂಡಿ ಮುಚ್ಚಲು ಕ್ರಮವಹಿಸಲಾಗುತ್ತಿದೆ ಎಂದರು.
ವಲಯ ಆಯುಕ್ತ ಕರೀಗೌಡ ಮಾತನಾಡಿ,ಯಲಹಂಕ ವಲಯ ವ್ಯಾಪ್ತಿಯಲ್ಲಿ 865 ಕಿ.ಮೀ ಉದ್ದದ 5,433 ರಸ್ತೆಗಳನ್ನು ಡಾಂಬರೀಕರಣ ನಡೆಸಲು ಯೋಜನೆ ರೂಪಿಸಲಾಗಿದೆ. 110 ಹಳ್ಳಿಗಳ ಪೈಕಿ ಯಲಹಂಕ ವಲಯದಲ್ಲಿ 14 ಹಳ್ಳಿಗಳು ಬರಲಿವೆ. 89 ಕಿ.ಮೀ .ಉದ್ದದ 499 ರಸ್ತೆಗಳನ್ನು ಅಭಿವೃದ್ಧಿ ಮಾಡಬೇಕಿದೆ. ಶ್ರೀ ಡಾಂಬರೀಕರಣ ಕೆಲಸ ಕೈಗೆತ್ತಿಕೊಳ್ಳಲಾಗುತ್ತದೆ. ವಲಯ ವ್ಯಾಪ್ತಿಯಲ್ಲಿ ಪ್ರಮುಖ ರಸ್ತೆ, ವಾರ್ಡ್ ರಸ್ತೆಗಳಲ್ಲಿ ಗುಂಡಿಗಳನ್ನು ಗುರುತಿಸಿ ಮುಚ್ಚುವ ಕೆಲಸ ಮಾಡಲಾಗುತ್ತಿದೆ. ಪ್ರಸ್ತುತ ವರ್ಷದಲ್ಲಿ 1,567 ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ ಎಂದರು.
ಜಂಟಿ ಆಯುಕ್ತ ಮೊಹಮ್ಮದ್ ನಯೀಮ್ ಮೊಮಿನ್, ಮುಖ್ಯ ಅಭಿಯಂತರ ರಂಗನಾಥ್, ಕಾರ್ಯಪಾಲಕ ಅಭಿಯಂತರರಾದ ಪ್ರದಿಪ್, ನಾಗಪ್ಪ ಕಮತಿ ಸೇರಿ ಮತ್ತಿತರರಿದ್ದರು.