ಗುಂಡಿಮಯವಾಗಿರುವ ಮುಖ್ಯ ರಸ್ತೆ

10-npk -3
Published on

ನಾಪೋಕ್ಲು: ನಾಪೋಕ್ಲು-ವಿರಾಜಪೇಟೆ ಮುಖ್ಯರಸ್ತೆಯ ಹಳೆ ತಾಲೂಕು ಬಳಿ ರಸ್ತೆ ಗುಂಡಿಗಳಿಂದ ಮೃತ್ಯುಕೂಪವಾಗಿದ್ದು, ದುರಸ್ತಿಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪಟ್ಟಣದ ಸಮೀಪದ ಹಳೆ ತಾಲೂಕು ಬಳಿಯ ಶ್ರೀ ಪೊನ್ನು ಮುತ್ತಪ್ಪ ದೇವಾಲಯದ ಪಕ್ಕದ ರಸ್ತೆಯಲ್ಲಿ ಹೊಂಡಗಳಿಂದ ತುಂಬಿದ್ದು, ರಸ್ತೆ ಸಂಚಾರಕ್ಕೆ ತೀವ್ರ ತೊಂದಯಾಗುತ್ತಿದೆ. ವಾಹನ ಸಂಚಾರ ದುಸ್ತರವಾಗಿದ್ದು, ಹೊಂಡಗಳ ಅರಿವಿಲ್ಲದೆ ಸವಾರರು ಬಿದ್ದು ಸಮಸ್ಯೆ ಅನುಭವಿಸಿದ್ದಾರೆ. ಗಣೇಶೋತ್ಸವದ ಸಂದರ್ಭದಲ್ಲಿ ದೇವಾಲಯದ ಸಮಿತಿ ಸದಸ್ಯರು ಕಾಂಕ್ರೀಟ್ ಹಾಕಿ ಗುಂಡಿ ಮುಚ್ಚುವ ಪ್ರಯತ್ನ ಮಾಡಿದ್ದರು. ಇದೀಗ ಮತ್ತೆ ರಸ್ತೆ ಹೊಂಡದಿಂದ ಕೂಡಿದ್ದು, ಅಪಘಾತಕ್ಕೆ ಆಹ್ವಾನ ನೀಡುವಂತಿದೆ. ಇನ್ನಾದರೂ ಸಂಬಂಧಪಟ್ಟವರು ಇತ್ತ ಗಮನಹರಿಸುವರೆ ಕಾದು ನೋಡಬೇಕಾಗಿದೆ. ಜೀವ ಹಾನಿ ಸಂಭವಿಸುವ ಮುನ್ನ ರಸ್ತೆ ದುರಸ್ತಿಪಡಿಸಲು ಗ್ರಾಮ ಪಂಚಾಯಿತಿ ಹಾಗೂ ಲೋಕೋಪಯೋಗಿ ಇಲಾಖೆ ಕೂಡಲೇ ಕಾರ್ಯಪ್ರವೃತ್ತರಾಗಬೇಕೆಂದು ಕಾಫಿ ಮಂಡಳಿಯ ಮಾಜಿ ಉಪಾಧ್ಯಕ್ಷ ಡಾ.ಸಣ್ಣುವಂಡ ಕಾವೇರಪ್ಪ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net