ರಸ್ತೆ ದುರಸ್ತಿಗೆ ಕ್ರಮಕೈಗೊಳ್ಳಿ

13LNG02
Published on

ಲಿಂಗಸುಗೂರು: ತಾಲೂಕಿನಲ್ಲಿ ಹೆದ್ದಾರಿ ಹಾಗೂ ಗ್ರಾಮೀಣ ಭಾಗದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಕೂಡಲೇ ದುರಸ್ತಿಗೊಳಿಸಿ ಎಚ್ಚರಿಕೆ ಫಲಕ ಅಳವಡಿಸಬೇಕೆಂದು ಒತ್ತಾಯಿಸಿ ಎಸಿ ಬಸವಣೆಪ್ಪ ಕಲಶೆಟ್ಟಿಗೆ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕ ಸಂಘಟನೆಯಿಂದ ಶುಕ್ರವಾರ ಮನವಿ ಸಲ್ಲಿಸಲಾಯಿತು.

ಪಟ್ಟಣದಲ್ಲಿ ರಸ್ತೆ ಕಾಮಗಾರಿ ಅಪೂರ್ಣಗೊಂಡಿರುವುದರಿಂದ ಗುಂಡಿಗಳು ನಿರ್ಮಾಣಗೊಂಡಿವೆ. ಮಳೆ ಬಂದಾಗ ಗುಂಡಿಗಳಲ್ಲಿ ನೀರು ತುಂಬಿ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಸುಮಾರು ಎರಡು ವರ್ಷಗಳಿಂದ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ. ಮುದಗಲ್, ಹಟ್ಟಿ, ಗುರುಗುಂಟಾ ಹೋಬಳಿ ವ್ಯಾಪ್ತಿಯ ಗ್ರಾಮೀಣ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ. ರಸ್ತೆ ಕಾಮಗಾರಿಗೆ ಬಿಡುಗಡೆಯಾಗುತ್ತಿರುವ ಹಣ ಸದ್ಬಳಕೆ ಆಗುತ್ತಿಲ್ಲ ಎಂದು ದೂರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net