ನಾಲಂದ ಕಾಲೇಜಿನಲ್ಲಿ ರಸ್ತೆ ಸುರಕ್ಷತೆ ಜಾಗೃತಿ

Bdk_Nalamanda
Published on

ಪೆರ್ಲ: ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕ ಹಾಗೂ ನಾಲಂದ ಚಾರಿಟೆಬಲ್ ಟ್ರಸ್ಟ್ ಜಂಟಿ ಆಶ್ರಯದಲ್ಲಿ ರಸ್ತೆ ಸುರಕ್ಷತೆ ಜಾಗೃತಿ ಶಿಬಿರ ಇತ್ತೀಚೆಗೆ ಆಯೋಜಿಸಲಾಯಿತು.

ಕಾಲೇಜು ಪ್ರಾಂಶುಪಾಲ ಶಂಕರ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಆರ್.ಟಿ.ಕಚೇರಿಯ ಸಹಾಯಕ ಮೋಟಾರು ವಾಹನ ತಪಾಸಣಾಧಿಕಾರಿ ಮನೀಶ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ರಸ್ತೆ ಸುರಕ್ಷತೆ ಹಾಗೂ ಕಾನೂನಿನ ಬಗ್ಗೆ ಮಾಹಿತಿ ನೀಡಿದರು. ಸ್ವಯಂ ಸೇವಕಿ ಶ್ರೀಲಕ್ಷ್ಮೀ ಸ್ವಾಗತಿಸಿದರು. ಗೋಕುಲ್ ನಿರೂಪಿಸಿದರು. ಎನ್ನೆಸ್ಸೆಸ್ ಯೋಜನಾಧಿಕಾರಿ ವರ್ಷಿತ್ ಕೆ.ಸಂಯೋಜಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net