

ಹಿರೇಕೆರೂರ: ರಸ್ತೆ ಬದಿ ಹಾಕಿದ್ದ ಮಣ್ಣಿನ ಗುಡ್ಡಿಗೆ ಬೈಕ್ ಡಿಕ್ಕಿಯಾಗಿ ಓರ್ವ ಮೃತಪಟ್ಟ ಘಟನೆ ತಾಲೂಕಿನ ಮಡ್ಲೂರ ಕ್ರಾಸ್ ಬಳಿ ಸೋಮವಾರ ನಡೆದಿದೆ.
ತಾಲೂಕಿನ ಚಿಕ್ಕೇರೂರ ಗ್ರಾಮದ ಪ್ರಶಾಂತ ಹನುಮಂತಪ್ಪ ಹೊಸಮನಿ (35) ಮೃತ ಬೈಕ್ ಸವಾರ.
ಈತ ಹಂಸಬಾವಿಯಿಂದ ತಿಳವಳ್ಳಿ ಕಡೆಗೆ ಹೋಗುತ್ತಿದ್ದ ಸಮಯದಲ್ಲಿ ರಸ್ತೆ ಬದಿ ಹಾಕಿದ್ದ ಮಣ್ಣಿನ ಗುಡ್ಡಿಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ. ಚಿಕಿತ್ಸೆಗಾಗಿ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಈ ಕುರಿತು ಹಂಸಬಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.