ಗುಂಡ್ಲುಪೇಟೆಯಲ್ಲಿ ರಸ್ತೆ ಸಂಚಾರ ತಡೆ

07-GPT-1
Published on

ಗುಂಡ್ಲುಪೇಟೆ: ಕಾಡಂಚಿನ ಗ್ರಾಮಗಳ ರೈತರ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಪಟ್ಟಣದಲ್ಲಿ ರೈತ ಸಂಘದ ಕಾರ್ಯಕರ್ತರು ಬುಧವಾರ ರಸ್ತೆ ಸಂಚಾರ ತಡೆ ನಡೆಸಿದರು.

ಮುಖಂಡ ಬೆಟ್ಟದ ಮಾದಹಳ್ಳಿ ಷಣ್ಮುಖಸ್ವಾಮಿ ನೇತೃತ್ವದಲ್ಲಿ ಪಟ್ಟಣದ ಪ್ರವಾಸಿ ಮಂದಿರದಿಂದ ಮುಖ್ಯ ರಸ್ತೆಯಲ್ಲಿ ಸಾಗಿದ ಪ್ರತಿಭಟನಾಕಾರರು, ಅರಣ್ಯಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿದರು. ಸ್ವಲ್ಪ ಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಳಿತು ವಾಹನಗಳ ಸಂಚಾರಕ್ಕೆ ತಡೆಯೊಡ್ಡಿದರು.

ವನ್ಯಜೀವಿ ದಾಳಿಯಿಂದ ಕಾಡಂಚಿನ ಗ್ರಾಮಗಳ ರೈತರಿಗೆ ಸಮಸ್ಯೆಯಾಗುತ್ತಿರುವ ಬಗ್ಗೆ ಹನೂರು ತಾಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ರೈತ ಸಂಘದಿಂದ ಕಳೆದ ಮೂರು ದಿನಗಳಿಂದಲೂ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭೇಟಿ ನೀಡದೆ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ. ಆದ್ದರಿಂದ ಅರಣ್ಯಾಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಿ ವನ್ಯಜೀವಿಗಳಿಂದಾಗುವ ತೊಂದರೆಗಳನ್ನು ತಪ್ಪಿಸಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net