ಫೆ.17ರಿಂದ ರಸ್ತೆ ಸಂಚಾರ ಗಣತಿಗೆ ಚಾಲನೆ

Vijayavani-Featured-Image
Published on

ಬೆಂಗಳೂರು: ಪ್ರಸಕ್ತ ವರ್ಷದ (2025) ರಸ್ತೆ ಸಂಚಾರ ಗಣತಿಯನ್ನು ಭಾನುವಾರ (ಫೆ.17) ಬೆಳಿಗ್ಗೆ 6 ಗಂಟೆಯಿಂದ ಫೆ.24ರ ಬೆಳಿಗ್ಗೆ 6ರವರೆಗೆ ಸತತ 7 ದಿನಗಳ ಕಾಲ ನಡೆಯಲಿದೆ. ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಸಂಚರಿಸುವ ವಾಹನಗಳ ಗಣತಿ ಮಾಡಲಾಗುತ್ತಿದ್ದು, ಇದಕ್ಕಾಗಿ ಅಂದಾಜು 5,030 ಗಣತಿ ಕೇಂದ್ರಗಳನ್ನು ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ರಸ್ತೆಗಳ ಮೇಲೆ ಆಯ್ಕೆ ಮಾಡಲಾಗಿದೆ.

ಗಣತಿಯ ಉದ್ದೇಶ ವಾಹನ ಸಂಚಾರದ ಬೆಳವಣೆಗೆ ತೀವ್ರತೆ ಗಮನಿಸಿ ರಸ್ತೆಗಳ ಮೇಲ್ಮೈಯನ್ನು ಅಭಿವೃದ್ಧಿ ಪಡಿಸುವುದು, ರಸ್ತೆಗಳನ್ನು ಅಗಲಗೊಳಿವುದು ಹಾಗೂ ರಸ್ತೆಗಳನ್ನು ಮೇಲ್ದರ್ಜೆಗೇರಿಸುವುದು ಸೇರಿ ಹಲವು ರಸ್ತೆಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸರ್ಕಾರವು ರೂಪಿಸಲು ಮತ್ತು ಕೈಗೆತ್ತಿಕೊಳ್ಳಲು ಅನುಕೂಲವಾಗಲಿದೆ.

ವಾಹನ ಸಂಚಾರ ವಿವರಗಳನ್ನು ಸಂಗ್ರಹಿಸಲು ಸ್ಥಾಪಿಸಲಾಗುವ ಗಣತಿ ಕೇಂದ್ರಗಳಲ್ಲಿ ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರ್‌ಗಳನ್ನು ನೇಮಿಸಲಾಗಿದೆ. ಕೆಲವು ಕೇಂದ್ರಗಳಲ್ಲಿ ಸಿ.ಸಿ. ಕ್ಯಾಮರಾಗಳನ್ನು ಅಳವಡಿಸಲಾಗಿದೆ. ವಾಹನ ಸಂಚಾರ ಗಣತಿಯನ್ನು ಯಶಸ್ವಿಯಾಗಿಸಲು ವಾಹನ ಚಾಲಕರು ಮತ್ತು ಸಾರ್ವಜನಿಕರು ಸಹಕರಿಸಬೇಕೆಂದು ಬೆಂಗಳೂರು ಸಂಪರ್ಕ ಮತ್ತು ಕಟ್ಟಡಗಳು (ದಕ್ಷಿಣ) ಮುಖ್ಯ ಇಂಜಿನಿಯರ್ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net