

ಬೆಳ್ತಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ’ಸಂಚಾರ ಸುರಕ್ಷತಾ ಜಾಗೃತಿ’ ಕಾರ್ಯಕ್ರಮ ನಡೆಯಿತು. ಬೆಳ್ತಂಗಡಿ ಸಂಚಾರಿ ಠಾಣೆ ಸಬ್‌ಇನ್‌ಸ್ಪೆಕ್ಟರ್ ಅರ್ಜುನ್ ಕೆ.ಎಚ್. ಸಂಪನ್ಮೂಲ ವ್ಯಕ್ತಿಯಾಗಿ, ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ನೀಡಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು.
ಪ್ರಾಚಾರ್ಯ ಡಾ.ಅಶೋಕ್ ಕುಮಾರ್ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮ ಸಂಯೋಜಕರಾದ ಎಲೆಕ್ಟ್ರಿಕಲ್ ವಿಭಾಗದ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ ಸ್ವಾಗತಿಸಿ, ಸಿವಿಲ್ ವಿಭಾಗದ ಸಹಪ್ರಾಧ್ಯಾಪಕ ರಾಮ್‌ಪ್ರಸಾದ್ ವಂದಿಸಿದರು. ವಿದ್ಯಾರ್ಥಿನಿ ಸುಚಿತ್ರಾ ನಿರೂಪಿಸಿದರು. ಸಿವಿಲ್ ವಿಭಾಗದ ಸಹಪ್ರಾಧ್ಯಾಪಕ ಡಾ.ವಿನಯ ಶ್ಯಾಮ್ ಸಹಕರಿಸಿದರು.