ರಸ್ತೆ ಸಂಚಾರ ತಡೆದು ಕುಣಿದಾಟ

traffic jam
ಮದಲಘಟ್ಟ ಗ್ರಾಮದ ಬಳಿ ಇರುವ ತುಂಗಭದ್ರಾ ಸೇತುವೆ ಮೇಲೆ ವಾಹನವನ್ನು ಅಡ್ಡವಾಗಿ ನಿಲ್ಲಿಸಿದ ಕಾರಣ ಪ್ರಯಾಣಿಕರು ಪರದಾಡಿದರು.
Published on

ಹೂವಿನಹಡಗಲಿ: ಪಟ್ಟಣ ಸೇರಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಐದು ದಿನ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಗಳನ್ನು ಶುಕ್ರವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು.

ತುಂಗಭದ್ರಾ ನದಿಗೆ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು ತಾಲೂಕಿನ ಮದಲಘಟ್ಟ ಬಳಿ ಗದಗ ಮತ್ತು ವಿಜಯನಗರ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಮಧ್ಯಭಾಗದಲ್ಲಿ ಕೆಲವರು ವಾಹನಗಳನ್ನು ಅಡ್ಡವಾಗಿ ನಿಲ್ಲಿಸಿ ಸಂಚಾರ ತಡೆದಿದ್ದಾರೆ.

ಅರ್ಧಗಂಟೆಗೂ ಹೆಚ್ಚು ಕಾಲ ರಸ್ತೆ ಸಂಚಾರ ತಡೆದು ಸೇತುವೆ ಮೇಲೆ ಕುಣಿದು ಕುಪ್ಪಳಿಸಿದ್ದಾರೆ. ಈ ವೇಳೆ ಹೂವಿನಹಡಗಲಿ ಹಾಗೂ ಮುಂಡರಗಿ ಕಡೆಗಳಿಂದ ಸಂಚರಿಸುತ್ತಿದ್ದ ಪ್ರಯಾಣಿಕರು ಸೇತುವೆ ದಾಟಲಾಗದೆ ತೊಂದರೆ ಅನುಭವಿಸಿದರು. ಇಲ್ಲಿ ಸಂಬಂಧಪಟ್ಟ ಇಲಾಖೆ ಸಿಬ್ಬಂದಿಯನ್ನು ನೇಮಿಸದ ಕಾರಣ ಇದಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net