ರಸ್ತೆ ಬದಿ ಸ್ವಚ್ಛತಾ ಕಾರ್ಯ

ರಸ್ತೆ ಬದಿ ಸ್ವಚ್ಛತಾ ಕಾರ್ಯ
Published on

ನಾಪೋಕ್ಲು: ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ, ಸಂಜೀವಿನಿ ಒಕ್ಕೂಟ, ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಸೋಮವಾರ ಸ್ವಚ್ಛತಾ ಕಾರ್ಯ ನಡೆಸಲಾಯಿತು.

ಮೂರ್ನಾಡುವಿನಿಂದ ನಾಪೋಕ್ಲು ಹಾಗೂ ಪಾರಾಣೆ ಮಾರ್ಗದಲ್ಲಿ ರಸ್ತೆ ಬದಿ ಗಿಡ ಗಂಟಿ, ಪ್ಲಾಸ್ಟಿಕ್, ಪೇಪರ್, ಕಸಗಳನ್ನು ತೆಗೆದು ಸ್ವಚ್ಛಗೊಳಿಸಲಾಯಿತು.
ಕಾಂತೂರು ಮೂರ್ನಾಡು ಗ್ರಾ.ಪಂ. ಅಧ್ಯಕ್ಷ ಕುಶನ್, ಮೂರ್ನಾಡು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಕಿ, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ದಮಯಂತಿ, ಗ್ರಾ.ಪಂ. ಹಾಗೂ ಒಕ್ಕೂಟದ ಸದಸ್ಯರು, ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net