ನೆಲ್ಯಾಡಿಯಲ್ಲಿ ರಸ್ತೆ ಬದಿ ಸ್ವಚ್ಛತೆ

swachathe (1)
Published on

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕು ನೆಲ್ಯಾಡಿ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು, ಕೌಕ್ರಾಡಿ ಗ್ರಾಮ ಪಂಚಾಯಿತಿ ವತಿಯಿಂದ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದ ಪ್ರಯುಕ್ತ ಕೌಕ್ರಾಡಿ -ನೆಲ್ಯಾಡಿ ಪೇಟೆಯ ರಸ್ತೆ ಬದಿಯನ್ನು ಸ್ವಚ್ಛಗೊಳಿಸಿದರು.

ಕೌಕ್ರಾಡಿ ಗ್ರಾಮ ಪಂಚಾಯಿತಿ ಅಧಕ್ಷ ಲೋಕೇಶ್ ಬಾಣಜಾಲು, ಪಂಚಾಯಿತಿ ಕಾರ್ಯದರ್ಶಿ ದೇವಿಕಾ, ನೆಲ್ಯಾಡಿ ವಲಯ ಜನಜಾಗೃತಿ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ಘಟಕ ಪ್ರತಿನಿಧಿ ರಮೇಶ್ ಬಾಣಜಾಲು, ವಲಯ ಮೇಲ್ವಿಚಾರಕ ಆನಂದ ಡಿ.ಬಿ, ಘಟಕ ಸಂಯೋಜಕಿ ನಮಿತಾ ಎಸ್.ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net