

ಗಂಗೊಳ್ಳಿ: ಕಸ ವಿಲೇವಾರಿ ತಾಣವಾಗಿ ಮಾರ್ಪಟ್ಟಿದ್ದ ಕುಂದಾಪುರ ತಾಲೂಕು ಗುಜ್ಜಾಡಿ ಗ್ರಾಮದ ನಾಯಕವಾಡಿ-ಮುಳ್ಳಿಕಟ್ಟೆ ರಸ್ತೆ ಇದೀಗ ತ್ಯಾಜ್ಯಮುಕ್ತವಾಗಿದೆ.
ಗುಜ್ಜಾಡಿ ಗ್ರಾಪಂ ವ್ಯಾಪ್ತಿಯ ನಾಯಕವಾಡಿ-ಮುಳ್ಳಿಕಟ್ಟೆ ರಸ್ತೆ ಇಕ್ಕೆಲಗಳಲ್ಲಿ ತ್ಯಾಜ್ಯ ರಾಶಿ ಎದ್ದು ಕಾಣುತ್ತಿದ್ದು, ಈ ಬಗ್ಗೆ ‘ವಿಜಯವಾಣಿ’ ಮೇ 27ರಂದು ವಿಸ್ತೃತ ವರದಿ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಗುಜ್ಜಾಡಿ ಗ್ರಾಪಂ ನಾಯಕವಾಡಿ-ಮುಳ್ಳಿಕಟ್ಟೆ ರಸ್ತೆ ಇಕ್ಕೆಲಗಳಲ್ಲಿ ಬಿದ್ದಿದ್ದ ತ್ಯಾಜ್ಯವನ್ನು ಜೆಸಿಬಿ ಮೂಲಕ ತೆರವುಗೊಳಿಸಿ ಪರಿಸರ ಸ್ವಚ್ಛಗೊಳಿಸಿದೆ. ಇದರಿಂದ ಪ್ರತಿನಿತ್ಯ ಈ ಮಾರ್ಗದ ಮೂಲಕ ಸಾಗುವ ಪ್ರಯಾಣಿಕರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದ್ದು, ಸ್ಥಳೀಯಾಡಳಿತದ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.