ಮೇ 23ರಂದು ರೋಹನ್ ಮೊಂತೆರೊ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

mng-20may-rohan monteiro
Published on


ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮೇ 23ರಂದು ಬೆಳಗ್ಗೆ 11.30 ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ರೋಹನ್ ಕಾರ್ಪೋರೇಷನ್‌ನ ಸ್ಥಾಪಕ ಮತ್ತು ಚೇರ್ಮನ್ ರೋಹನ್ ಮೊಂತೆರೊ
ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಪೋರೆಟ್ ಸಂವಹನಾಧಿಕಾರಿ ಜೈದೀಪ್ ಶೆಣೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net