

ಧರ್ಮಸ್ಥಳ: ಬೆಳ್ತಂಗಡಿ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನೀರಚಿಲುಮೆ ಎಂಬಲ್ಲಿಗುರುವಾರ ರಾತ್ರಿ ಮನೆಯವರನ್ನು ಕಟ್ಟಿಹಾಕಿ ಚಿನ್ನಾಭರಣ ದರೋಡೆ ಮಾಡಿದ ಘಟನೆ ನಡೆದಿದೆ.
ದರೋಡೆಕೋರರು 40 ಪವನ್ ಚಿನ್ನ, 1 KG ಬೆಳ್ಳಿ , 25,000 ನಗದು ಹಣ ದರೋಡೆ ಮಾಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಧರ್ಮಸ್ಥಳ ಗ್ರಾಮದ ನೀರಚಿಲುವೆ ಬಳಿಯ ಅಚ್ಚುತ ಭಟ್ ಎಂಬವರ ಮನೆಯಲ್ಲಿ ದರೋಡೆ ನಡೆದಿದ್ದು, ಸ್ಥಳಕ್ಕೆ ಬೆಳ್ತಂಗಡಿ ಪೊಲೀಸ್ ಠಾಣಾ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್.ಪಿ.ಜಿ , ಧರ್ಮಸ್ಥಳ ಪೊಲೀಸ್ ಠಾಣಾ ಪಿಎಸ್ಐ ಪವನ್ ನಾಯ್ಕ್ ಮತ್ತು ಇತರೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.