ನ್ಯಾಯಾಲಯದ ಆವರಣದಲ್ಲೇ ಆತ್ಮಹತ್ಯೆಗೆ ಯತ್ನಿಸಿದ ದರೋಡೆ ಆರೋಪಿ!

Crime
Published on

ಕೊಪ್ಪಳ: ದರೋಡೆ ಆರೋಪಿಯೊಬ್ಬ ನ್ಯಾಯಾಲಯದ ಆವರಣದಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣವೊಂದು ನಡೆದಿದೆ. ಕೊಪ್ಪಳ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಈ ಘಟನೆ ನಡೆದಿದೆ. ಮಹಾರಾಷ್ಟ್ರ ಮೂಲದ ಆರೋಪಿ ಪ್ರಶಾಂತ್ ಆತ್ಮಹತ್ಯೆಗೆ ಯತ್ನಿಸಿದವ.

ಕೊಪ್ಪಳ ಜಿಲ್ಲೆ ಬೇವೂರ್‌ ಗ್ರಾಮದ ಕೆಪಿಜಿ ಬ್ಯಾಂಕ್ ದರೋಡೆ‌ ಪ್ರಕರಣದ ಮೂವರು ಪ್ರಮುಖ ಆರೋಪಿಗಳನ್ನು‌ ಇಂದು ಕೊಪ್ಪಳ ಜಿಲ್ಲಾ ನ್ಯಾಯಾಲಯಕ್ಕೆ ಪೊಲೀಸರು ಹಾಜರು ಪಡಿಸಿದ್ದರು. ಈ ಸಂದರ್ಭದಲ್ಲಿ ಆರೋಪಿಗಳ ಪೈಕಿ ಒಬ್ಬನಾಗಿರುವ ಪ್ರಶಾಂತ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ನ್ಯಾಯಾಲಯಕ್ಕೆ ಹಾಜರುಪಡಿಸಿ ವಾಪಸ್ ಕರೆದೊಯ್ಯುವಾಗ ಪ್ರಶಾಂತ್ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಈತ ಬ್ಲೇಡ್​ನಿಂದ ಹಣೆ ಕೊಯ್ದುಕೊಂಡು ಸಾಯಲು ಪ್ರಯತ್ನಿಸಿದ್ದ. ಕೂಡಲೇ ಆತನನ್ನು ರಕ್ಷಿಸಿದ ಪೊಲೀಸರು ಚಿಕಿತ್ಸೆ ಕೊಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net