ರಾಬಿನ್ ದೇವಯ್ಯ ಸಹಕಾರ ಯೂನಿಯನ್ ಅಧ್ಯಕ್ಷ

yunion bank
Published on

ಮಡಿಕೇರಿ: ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ಪಳೆಯಂಡ.ಯು.ರಾಬಿನ್ ದೇವಯ್ಯ ಆಯ್ಕೆಯಾಗಿದ್ದಾರೆ.

ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಹಿನ್ನೆಲೆ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಸಭೆ ನಡೆಸಲಾಯಿತು. ಅಧ್ಯಕ್ಷ ಸ್ಥಾನಕ್ಕೆ ಪಳೆಯಂಡ.ಯು.ರಾಬಿನ್ ದೇವಯ್ಯ ಅವರು ಏಕ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆ ಅವರು ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಎಚ್.ಕೆ.ಮಾದಪ್ಪ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.

ಈ ಸಂದರ್ಭ ಯೂನಿಯನ್ ನಿರ್ದೇಶಕರಾದ ಕೆ.ಟಿ.ಪರಮೇಶ್, ವಿ.ಕೆ.ಅಜಯ್ ಕುಮಾರ್, ಎ.ಎಸ್.ಶ್ಯಾಂಚಂದ್ರ, ಎ.ಎಂ.ಮುತ್ತಪ್ಪ, ಎ.ಸಿ.ಕುಶಾಲಪ್ಪ, ಎಂ.ಟಿ.ಸುಬ್ಬಯ್ಯ, ಎಂ.ಎಂ.ಶ್ಯಾಮಲಾ, ವಿ.ಸಿ.ಅಮೃತ್, ಎಸ್.ಆರ್.ಸುನಿಲ್ ರಾವ್, ಸಹಕಾರ ಸಂಘಗಳ ಉಪನಿಬಂಧಕರಾದ ಎಚ್.ಡಿ.ರವಿ ಕುಮಾರ್ ಹಾಗೂ ರಿಟರ್ನಿಂಗ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎಂ.ಸಿ.ಚಂದ್ರಶೇಖರ್, ಸಹಾಯಕ ರಿಟರ್ನಿಂಗ್ ಅಧಿಕಾರಿ ಹಾಗೂ ಸಹಕಾರ ಸಂಘಗಳ ಸಹಾಯಕ ನಿಬಂಧಕ ಶೈಲಜಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net