ರಾಕಿಂಗ್ ಸ್ಟಾರ್ ಯಶ್ ಜನ್ಮದಿನ: 20 ಅಡಿ ಬ್ಯಾನರ್ ಕಟ್ಟುವಾಗ ಅವಘಡ, ಮೂವರು ಯುವಕರು ಸಾವು

yash
Published on

ಗದಗ: ರಾಕಿಂಗ್ ಸ್ಟಾರ್ ಯಶ್ ಜನ್ಮದಿನದ ಅಂಗವಾಗಿ 20 ಅಡಿ ಬ್ಯಾನರ್ ಕಟ್ಟುವಾಗ ಮೂವರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನೀಲಗಿರಿ ತೋಪಕ್ಕೆ ಬ್ಯಾನರ್ ಕಟ್ಟಿ ಮೇಲೆತ್ತುವಾಗ ವಿದ್ಯುತ್ ತಗುಲಿ ಈ ಅನಾಹುತ ಸಂಭವಿಸಿದೆ.

ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದು, ಹನಮಂತ ಹರಿಜನ (21), ಮುರಳಿ ನಡವಿನಮನಿ (20), ನವೀನ್ ಹರಿಜನ (19) ಮೃತಪಟ್ಟ ಯುವಕರು. ಎಲ್ಲರೂ ಸೂರಣಗಿ ಗ್ರಾಮದ ಯುವಕರು ಎನ್ನಲಾಗಿದೆ.

ನಾಲ್ವರಿಗೆ ಗಂಭೀರ ಗಾಯ 
ಮಂಜುನಾಥ್ ಹರಿಜನ, ದೀಪಕ ಹರಿಜನ, ಪ್ರಕಾಶ ಮ್ಯಾಗೇರಿ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳಿಗೆ ಲಕ್ಷ್ಮೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net