ಸಿಎಟಿ ಅಂಗಳಕ್ಕೆ ರೋಹಿಣಿ ವರ್ಗಾವಣೆ: 6ಕ್ಕೆ ವಿಚಾರಣೆ

B Sharath Rohini Sindhuri
Published on

*ಸಿಎಟಿ ಮೆಟ್ಟಿಲೇರಿದ ಬಿ.ಶರತ್ * ರಾಜ್ಯ ಸರ್ಕಾರಕ್ಕೆ ನೋಟಿಸ್

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ತಮ್ಮನ್ನು ವರ್ಗಾವಣೆ ಮಾಡಿರುವ ಕ್ರಮ ಪ್ರಶ್ನಿಸಿ ಐಎಎಸ್ ಅಧಿಕಾರಿ ಬಿ.ಶರತ್ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ನೋಟಿಸ್ ಜಾರಿಗೊಳಿಸಿದೆ.

ತಿಂಗಳ ಹಿಂದಷ್ಟೇ ತಮ್ಮನ್ನು ಮೈಸೂರು ಜಿಲ್ಲಾಧಿಕಾರಿ ಹುದ್ದೆಗೆ ನಿಯೋಜಿಸಿ ಆದೇಶ ಹೊರಡಿಸಿದ್ದ ಸರ್ಕಾರ, ಇದೀಗ ಆಡಳಿತಾತ್ಮಕ ನಿಯಮಗಳ ಪ್ರಕಾರ ಸೂಕ್ತ ಕಾರಣ ನೀಡದೆ ಏಕಾಎಕಿ ವರ್ಗಾವಣೆ ಮಾಡಿದೆ. ತಮ್ಮ ಜಾಗಕ್ಕೆ ರೋಹಿಣಿ ಸಿಂಧೂರಿ ನಿಯೋಜಿಸಿದೆ. ಸರ್ಕಾರದ ಆದೇಶ ನಿಯಮಬಾಹಿರವಾಗಿದೆ ಎಂದು ಆಕ್ಷೇಪಿಸಿ ಬಿ.ಶರತ್ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ಸಿಎಟಿ, ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ಅ.6ಕ್ಕೆ ವಿಚಾರಣೆ ಮುಂದೂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net