ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಖಂಡನೆ

ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಖಂಡನೆ
Published on

ಸಿದ್ದಾಪುರ: ದೇಶದ ರಕ್ಷಣೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಹಾಗೂ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡಿರುವುದನ್ನು ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್‌ನ ವಿರಾಜಪೇಟೆ ಘಟಕ ಖಂಡಿಸಿದೆ.

ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಅಸೋಸಿಯೇಷನ್‌ನ ವಿರಾಜಪೇಟೆ ತಾಲೂಕು ಅಧ್ಯಕ್ಷ ಅಂತೋಣಿ ರಾಬಿನ್ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ದೇಶಭಕ್ತಿ ಮತ್ತು ಶಿಸ್ತಿಗೆ ಹೆಸರುವಾಸಿಯಾದ ಫೀ.ಮಾ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಕುರಿತು ಅವಹೇಳನ ಮಾಡಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ಹಾಗೂ ಯಾರದೇ ಭಾವನೆಗೆ ಧಕ್ಕೆ ಬಾರದಂತೆ ಸಂದೇಶಗಳ ರವಾನಿಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net