

ವಿಜಯವಾಣಿ ಸುದ್ದಿಜಾಲ ಗದಗ
ಏತ ನೀರವಾವರಿ ಮೂಲಕ ಡಂಬಳದ ಪುರಾತನ ಐತಿಹಾಸಿಕ ಕೆರೆ ತುಂಬಿಸಲಾಗಿದೆ. ಈ ಭಾಗದ ರೈತರಿಗೆ ಕೆರೆಯಿಂದ ಅನುಕೂಲ ಆಗಿದೆ ಎಂದು ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ, ರೋಣ ಶಾಸಕ ಜಿ.ಎಸ್.ಪಾಟೀಲ ಹೇಳಿದರು.
ಡಂಬಳ ಗ್ರಾಮದ ಐತಿಹಾಸಿಕ ಕೆರೆಗೆ ಶಾಸಕ ಜಿ.ಎಸ್. ಪಾಟೀಲ ಹಾಗೂ ಸಚಿವ ಡಾ.ಎಚ್.ಕೆ.ಪಾಟೀಲ ರವಿವಾರ ಬಾಗಿನ ಸರ್ಮಪಿಸಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಳದ ಬಾರಿ ಈ ಕ್ಷೇತ್ರದ ಜನಪ್ರತಿನಿಧಿ ಆಗಿ ಅತ್ಯವಶ್ಯಕ ವಾದ ಕೆರೆಗೆ ನೀರು ತುಂಬಿಸುವ ಕಾರ್ಯ ಮಾಡಲಾಗಿದೆ. ಏತ ನೀರಾವರಿ ಯೋಜನೆಯ ಮೂಲಕ ಎಲ್ಲರ ಸಹಕಾರದಿಂದ ಹೀರೆವಡ್ಡಟ್ಟಿ, ಬಸಾಪುರ, ತಾಮ್ರಗುಂಡಿ ಕೆರೆ ಸೇರಿದಂತೆ ಜಿಲ್ಲೆಯ ಎಲ್ಲ ಕೆರೆಗೆಳನ್ನು ತುಂಬಿಸಿ ರೈತರಿಗೆ ಅನುಕೂಲ ವಾಗುವ ವ್ಯವಸ್ಥೆ ಕಲ್ಪಿಸಲಾಗಿದೆ. ತಾಲೂಕ ಆಡಳಿತದಿಂದ ವಿಧವಾ ವೇತನ, ವೃದ್ಯಾಪ ವೇತನ, ಸಂದ್ಯಾ ಸುರಕ್ಷತಾ ಸೇರಿದಂತೆ ಹಲವಾರು ಜನಪರ ಯೋಜನೆಗಳನ್ನು ನೀಡಲಾಗಿದೆ ಹಾಗೂ ಬಹಳ ದಿನದಿಂದ ಬಾಕಿ ಉಳಿದ ಅರಣ್ಯ ಭೂಮಿಯಲ್ಲಿ ಕೃಷಿ ಮಾಡಿದ ರೈತರಿಗೆ ಇಂದು ಆರ್ ಟಿ ಸಿ ನೀಡವುದು ಹಾಗೂ ಮನೆಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಾಗಿದೆ ಎಂದು ಜಿ.ಎಸ್. ಪಾಟೀಲ ಹೇಳಿದರು.
ಮುಖ್ಯಮಂತ್ರಿ ಅವರ ವಿಶೇಷ ಅನುದಾನದಲ್ಲಿ ರಸ್ತೆ ಕಾಮಗಾರಿ, ಶಾಲೆಗಳ ರಿಪೇರಿ ಸೇರಿದಂತೆ ಅವಶ್ಯಕ ಕೆಲಗಳಸನ್ನು ಪ್ರಾರಂಭ ಮಾಡಲಾಗಿದೆ. ಪಂಶುಸಂಗೋಪಣೆ ಇಲಾಖೆಯಿಂದ ದನಕರಗಳ ಆರೋಗ್ಯ ದೃಷ್ಟಿಯಿಂದ ಅಂಬ್ಯುಲೆನ್ಸ್ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ಸಮರ್ಪಕವಾಗಿ ಕಲ್ಪಿಸಲಾಗಿದೆ. ಸರ್ಕಾರದ ಪಂಚ ಗ್ಯಾರಂಟಿಗಳಿಗೆ 58000 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ಬಡವರ ಆಥಿರ್ಕ ಅಭಿವೃದ್ಧಿಗೆ ಸಹಕಾರಿಯಾದ ಪಂಚ ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ತಿಳಿಸಿದರು.
ತಹಸೀಲ್ದಾರ ಎರಿಸ್ವಾಮಿ ಪಿ ಎಸ್ ಮಾತನಾಡಿ, ಸರ್ಕಾರದ ಅತ್ಯುತ್ತಮ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಮನೆ ಮನೆಗೆ ತಲುಪಿಸುವ ಉದ್ದೇಶದಿಂದ ಜನಸ್ಪಂದನ, ಉತಾರಗಳಿಗೆ ಆಧಾರ್ ಜೋಡಣೆ, ಪೋಡಿ ದುರಸ್ಥಿ ಸೇರಿದಂತೆ ಅನೇಕ ಯೋಜನೆಗಳನ್ನು ನೀಡಲಾಗಿದೆ. ಅವುಗಳನ್ನು ಎಲ್ಲರು ಸಮರ್ಪಕವಾಗಿ ಸದುಪಯೋಗ ಪಡೆಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳಡಿ ಆಯ್ಕೆಯಾದ ಫಲಾನುಭವಿಗಳಿಗೆ ಆದೇಶ ಪ್ರತಿಗಳನ್ನು ನೀಡಲಾಯತು. ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷೆ ಶಿವಲೀಲಾ ಬಂಡಿಹಾಳ, ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ಶೋಭಾ ಮೇಟಿ, ಡಿ. ಡಿ. ಮೋರನಾಳ ಇತರೆ ಅಧಿಕಾರಿಗಳು ಇದ್ದರು.