ಕೂಲಿಕಾರರ ಜೊತೆಗೆ ಸಮನ್ವಯತೆ ಸಾಧಿಸಿ ಕೆಲಸ ತಗೆದುಕೊಳ್ಳಿ : ಪಿಡಿಓ ಶಿಲ್ಪಾ ಕವಲೂರ

photo 2
Published on

ರೋಣ : ನರೇಗಾ ಯೋಜನೆಯು ಬೇಸಿಗೆ ದಿನಗಳಲ್ಲಿ ದುಡಿಯುವ ರಟ್ಟೆಗಳಿಗೆ ಶಕ್ತಿ ತುಂಬಲು ನೆರವಾಗುತ್ತದೆ. ಹೀಗಾಗಿ ನಿಮ್ಮ ತಂಡದ ಸಂಪೂರ್ಣ ಜವಾಬ್ದಾರಿ ನೀವು ತೆಗೆದುಕೊಂಡು ಅವರ ಕೆಲಸ ತೆಗೆದುಕೊಳ್ಳವದು ಹಾಗೂ ಅವರಿಗೆ ಸಂಪೂರ್ಣ ವೇತನ ಪಾವತಿ ಆಗುವ ವರೆಗೂ ಜವಾಬ್ದಾರಿ ಆಗಿರುತ್ತಿರಿ ಎಂದು ಕಾಯಕ ಬಂದುಗಳಿಗೆ  ಪಂಚಾಯತಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶಿಲ್ಪಾ ಕವಲೂರ ಹೇಳಿದರು.

ರೋಣ ತಾಲೂಕಿನ ಕುರುಡಗಿ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ ವಲಸೆ ಯಾಕ್ರಿ ನಿಮ್ಮೂರಲ್ಲೇ ಉದ್ಯೋಗ ಖಾತ್ರಿ ಅಭಿಯಾನ ಹಾಗೂ ಕಾಯಕ ಬಂಧುಗಳ ಸಭೆ ಕಾರ್ಯಕ್ರಮ ದಲ್ಲಿ ಮಾತನಾಡಿದ ಅವರು ಬೇಸಿಗೆ ದಿನಗಳಲ್ಲಿ ನಮ್ಮ ಭಾಗದಲ್ಲಿ ಕೆಲಸ ಕಡಿಮೆ ಇರುತ್ತದೆ ಆ ಸಂದರ್ಭದಲ್ಲಿ ಮಹಿಳೆಯರು ಮತ್ತು ಪುರುಷರಿಗೆ ಸಮಾನ ಕೂಲಿ ನೀಡಲಾಗುತ್ತದೆ. ಏಪ್ರಿಲ್ 1 ರಿಂದ ಕುರುಡಗಿ ಗ್ರಾಮ ಪಂಚಾಯತಿ ಯಲ್ಲಿ ಸಾಮೂಹಿಕ ಕಾಮಗಾರಿ ಪ್ರಾರಂಭ ಮಾಡಲಾಗುತ್ತದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಖಾತ್ರಿಯ ಸಮುದಾಯ ಕೆಲಸಗಳಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು. ಎನ್ಎಂಎಂಎಸ್ ಆ್ಯಪ್ ಬಗ್ಗೆ ಮಾಹಿತಿ ನೀಡಿ ಕಾಯಕ ಬಂಧುಗಳು ಎನ್ಎಂಎಂಎಸ್ ಆ್ಯಪ್ನ ಮೂಲಕ ಹಾಜರಾತಿ ಹಾಕಿ, ಕೆಲಸದಲ್ಲಿ ಯಾವುದೇ ರೀತಿಯ ವಿಳಂಬವಾಗದಂತೆ ನೋಡಿಕೊಳ್ಳಬೇಕು ಎಂದರು.

ತಮ್ಮ ಕೂಲಿಕಾರರ ಆಧಾರ ಸಂಖ್ಯೆಗೆ ಬ್ಯಾಂಕ್ ಖಾತೆ ಸಂಖ್ಯೆ ಲಿಂಕ್ ಹಾಗೂ ಉದ್ಯೋಗ ಚೀಟಿ ಓಅPI ಲಿಂಕ್ ಕಡ್ಡಾಯವಾಗಿ ಮಾಡಿಸಬೇಕು. ಕೆಲಸದ ಸ್ಥಳಗಳಲ್ಲಿ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ, ನೆರಳು,ಕುಡಿಯುವ ನೀರಿನ ವ್ಯವಸ್ಥೆ ಗ್ರಾಮ ಪಂಚಾಯತಿ ಯಿಂದ ಮಾಡಲಾಗುತ್ತದೆ ಎಂದರು. ಇನ್ನು ಕೆಲಸದ ಸ್ಥಳದಲ್ಲಿ ಮಕ್ಕಳನ್ನು ಕರೆ ತರಬಾರದು ಅದಕ್ಕಾಗಿ ಆರು ತಿಂಗಳಿಂದ ಮೂರು ವರ್ಷದ ಮಕ್ಕಳಿಗೆ ನಮ್ಮ ಗ್ರಾಮ ಪಂಚಾಯತಿಯಿಂದ ಕೂಸಿನ ಮನೆ ಆರಂಭಮಾಡಿದ್ದು, ತಾವುಗಳು ತಮ್ಮ ಮಕ್ಕಳನ್ನು ಅಲ್ಲಿಯೇ ಬಿಟ್ಟು ಕೆಲಸಕ್ಕೆ ಹೋಗಬೇಕು ಎಂದರು.

ಐಇಸಿ ಸಂಯೋಜಕರಾದ ಮಂಜುನಾಥ ಮಾತನಾಡಿ ಕೆಲಸದ ಸ್ಥಳದಲ್ಲಿ ಕೂಲಿಕಾರರ ಹಾಜರಾತಿಯನ್ನು ಎರಡು ಹಂತದಲ್ಲಿ ಓಒಒS ಆ್ಯಪ್ ನಲ್ಲಿ ಸೆರೆ ಹಿಡಿಯಬೇಕು. ಕೂಲಿಕಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಂತ್ರಿಕ ಸಹಾಯಕ ಗುರುಲಿಂಗಯ್ಯ ಹಿರೇಮಠ, ಬಿಎಫ್.ಟಿ, ಪ್ರಕಾಶ ಅಂಬಕ್ಕಿ, ಜಿಕೆಎಂ ಯಶೋದಾ ಅಮರಗೋಳ, ಹಾಗೂ ಕಾಯಕ ಬಂಧುಗಳು, ಸ್ವಸಹಾಯ ಸಂಘದ ಸದಸ್ಯರು, ಮತ್ತು ಪಂಚಾಯತ ಸಿಬ್ಬಂದಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net