ಕೊಠಡಿಗಳ ಕಾಮಗಾರಿ ಪೂರ್ಣಗೊಳ್ಳಲಿ

08mdl03
ಮುದಗಲ್ ಸಮೀಪದ ಮಾವಿನಬಾವಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಬೀಗ ಜಡೆದು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಎಸ್ಡಿಎಂಸಿ ಅಧ್ಯಕ್ಷ ಹಾಜಿ ಮಲಂಗಬಾಬಾ, ಗ್ರಾಮಸ್ಥರಾದ ರುದ್ರಗೌಡ, ಹಸನ್, ಬಾಲರಾಜ, ಹುಲಗಪ್ಪ, ನಾಗರಾಜ, ಬಸನಗೌಡ ಇತರರಿದ್ದರು.
Published on

ಮುದಗಲ್: ಸಮೀಪದ ಮಾವಿನಬಾವಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಐದು ಕೊಠಡಿಗಳ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯಿಸಿ ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಶಕ್ರವಾರ ಪ್ರತಿಭಟಿಸಿದರು.

2021-22 ನೇ ಸಾಲಿನ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ 54.80 ಲಕ್ಷ ರೂ.ಗಳ ವೆಚ್ಚದಲ್ಲಿ ಐದು ಕೊಠಡಿಗಳ ನಿರ್ಮಾಣ ಕಾಮಗಾರಿಯನ್ನು ಗುತ್ತಿಗೆದಾರ ಅಮರಗುಂಡಪ್ಪ ಮೇಟಿ ಪಡೆದಿದ್ದಾರೆ.

ಈ ಶಾಲೆಯಲ್ಲಿ 1ರಿಂದ 7ನೇ ತರಗತಿವರೆಗೆ ಸುಮಾರು 300ಕ್ಕೂ ಹೆಚ್ಚು ಮಕ್ಕಳು ಅಭ್ಯಾಸ ಮಾಡುತ್ತಿದ್ದು, ಕೊಠಡಿಗಳ ಕೊರತೆಯಿಂದ ಹೊರಗಡೆ ಅಭ್ಯಾಸ ಮಾಡುವಂತಾಗಿದೆ. ಕಳೆದ ವರ್ಷದಲ್ಲಿ ಆರಂಭವಾದ ಕಟ್ಟಡಗಳ ಕಾಮಗಾರಿ ಇದುವರೆಗೂ ಮುಗಿದಿಲ್ಲ.

ಹಲವಾರು ಬಾರಿ ಶಾಲಾ ಕಟ್ಟಡ ನಿರ್ಮಾಣ ನನೆಗುದಿಗೆ ಬಿದ್ದಿರುವ ಬಗ್ಗೆ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದರೂ ನಿರ್ಲಕ್ಷೃ ಧೋರಣೆ ಅನುಸರಿಸುತ್ತಿರುವುದು ಸರಿಯಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಹುಂಬಣ್ಣ ರಾಠೋಡ ಸ್ಥಳಕ್ಕೆ ಆಗಮಿಸಿ, ಮೂರು ತಿಂಗಳೊಳಗೆ ಕಾಮಗಾರಿ ಮುಗಿಸುವಂತೆ ಗುತ್ತಿಗೆದಾರನಿಗೆ ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net