ತಂಬಾಕು ಸೇವನೆ ವಿರುದ್ಧ ಗುಲಾಬಿ ಆಂದೋಲನ ಜಾಥಾ

21cbp3
Published on

ಚಿಕ್ಕಬಳ್ಳಾಪುರ: ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ತುತ್ತಾಗಬೇಕಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಎಚ್ಚರಿಕೆ ನೀಡಿದರು.

ಚಿಕ್ಕಬಳ್ಳಾಪುರದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಜಿ.ಪಂ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯು ಕೈಗೊಂಡಿದ್ದ ಗುಲಾಬಿ ಆಂದೋಲನ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್ ಮಾತನಾಡಿ, ಇತ್ತೀಚಿಗಿನ ದಿನಗಳಲ್ಲಿ ಗಾಂಜಾ ವ್ಯಸನಿಗಳು ಹೆಚ್ಚಾಗುತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಹರೀಶ್, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ. ಕೃಷ್ಣ ಪ್ರಸಾದ್, ತಾಲ್ಲೂಕು ವೈದ್ಯಾಧಿಕಾರಿ ಡಾ. ಮಂಜುಳಾ, ಸರ್ಕಾರಿ ಪ್ರೌಢಶಾಲೆಯ ಪ್ರಾಂಶುಪಾಲೆ ಪ್ರಭಾವತಿ ಮತ್ತಿತರರು ಇದ್ದರು.

*ಜಾಥಾ ಕಾರ್ಯಕ್ರಮ

ಜಾಥಾ ಕಾರ್ಯಕ್ರಮಕ್ಕೆ ಚಿಕ್ಕಬಳ್ಳಾಪುರ ನಗರದಲ್ಲಿನ ಬಿ.ಬಿ ರಸ್ತೆಯ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಚಾಲನೆ ನೀಡಲಾಯಿತು. ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಭಿತ್ತಿ ಪತ್ರಗಳನ್ನು ಹಿಡಿದು ಸಾಗಿದರು. ಇದೇ ವೇಳೆ ಪ್ರಮುಖ ರಸ್ತೆಗಳಲ್ಲಿನ ವಾಣಿಜ್ಯ ಮಳಿಗೆಗಳು ಹಾಗೂ ಅಂಗಡಿ ಮಾಲೀಕರು, ಕಾರ್ಮಿಕರು, ಗ್ರಾಹಕರಿಗೆ ಗುಲಾಬಿ ಹೂವು ಕೊಟ್ಟು ತಂಬಾಕು ಮಾರಾಟ ಹಾಗೂ ಸೇವನೆಗೆ ಅವಕಾಶ ನೀಡದಿರಲು ಮನವಿ ಮಾಡಲಾಯಿತು. ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಯಿತು. ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಯಿತು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net