ರೋಟರಾಕ್ಟ್ ಜಿಲ್ಲಾಮಟ್ಟದ ವಾರ್ಷಿಕ ರಸಪ್ರಶ್ನೆ ಸ್ಪರ್ಧಾಕೂಟ-2024ಚಮನ್ ಎಂ. ಮತ್ತು ಸಾತ್ವಿಕ್ ಯು.ಕೆ ಜೋಡಿ ತಂಡಕ್ಕೆ ಪ್ರಶಸ್ತಿ

mng--12 may Rotary Quizz
Published on

ಮಂಗಳೂರು: ಜಿಲ್ಲಾ ರೋಟರಾಕ್ಟ್ ಸಂಸ್ಥೆಯ ಆಶ್ರಯದಲ್ಲಿ ರೋಟರಾಕ್ಟ್ ಮಾಹಿತಿ ಮತ್ತು ಜಾಗೃತಿ ಅಭಿಯಾನದ ಅಂಗವಾಗಿ ದಿ ರೋ. ಶಾಂತರಾಮ ವಾಮಂಜೂರು ಸ್ಮಾರಕ 18ನೇ ವಾರ್ಷಿಕ ಅಂತರ್‌ಕ್ಲಬ್ ಜಿಲ್ಲಾ ಮಟ್ಟದ ರೋಟರಾಕ್ಟ್ ರಸಪ್ರಶ್ನೆ ಸ್ಪರ್ಧಾಕೂಟವು ಸಂಸ್ಥೆಯ ಸಭಾಪತಿ ಡಾ.ದೇವದಾಸ್ ರೈ ನೇತೃತ್ವದಲ್ಲಿ ಭಾನುವಾರ ನಗರದ ಕೆನರಾ ಕ್ಲಬ್ ಸಭಾಂಗಣದಲ್ಲಿ ಜರಗಿತು.


ರೋಟರಾಕ್ಟ್ ಕ್ಲಬ್ ಸಂತ ಅಲೋಶಿಯಸ್ ಕಾಲೇಜ್‌ನ್ನು ಪ್ರತಿನಿಧಿಸಿದ ಚಮನ್ ಎಂ. ಮತ್ತು ಸಾತ್ವಿಕ್ ಯು. ಕೆ. ಜೋಡಿ ತಂಡವು ಪ್ರಥಮ ಸ್ಥಾನ ಗಳಿಸಿತು. ರೋಟರಾಕ್ಟ್ ಕ್ಲಬ್ ಪುತ್ತೂರು ಸಂಸ್ಥೆಯನ್ನು ಪ್ರತಿನಿಧಿಸಿದ ಧನುಷಾ ಮತ್ತು ಶ್ರೇಯಸ್ ಜೋಡಿ ತಂಡವು ದ್ವಿತೀಯ ಸ್ಥಾನ ಪಡೆಯಿತು. ಇದೊಂದು ರೋಮಾಂಚಕಾರಿ ಮತ್ತು ಕುತೂಹಲಕಾರಿ ಸ್ಪರ್ಧೆಯಾಗಿತ್ತು.


ಖ್ಯಾತ ತುಳು ಚಲನಚಿತ್ರ ನಟ ಬೋಜರಾಜ ವಾಮಂಜೂರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ದಿವಂಗತ ಸಹೋದರ ಶಾಂತಾರಾಮ ವಾಮಂಜೂರು ಸ್ಮರಣಾರ್ಥ ವರ್ಷಂಪ್ರತಿ ಈ ಸ್ಪರ್ಧಾಕೂಟವನ್ನು ಆಯೋಜಿಸುವ ಉತ್ತಮ ಸಮಾಜಸೇವಾ ಕಾರ್ಯ ಶ್ಲಾಘನೀಯ ಎಂದ ಅವರು, ರೋಟರ‌್ಯಾಕ್ಟ್ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿ, ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ, ಪ್ರಮಾಣ ಪತ್ರ ಪ್ರದಾನ ಮಾಡಿ ಅಭಿನಂದಿಸಿದರು.


ರೋಟರ‌್ಯಾಕ್ಟ್ ಜಿಲ್ಲಾ ಸಮಿತಿ ಅಧ್ಯಕ್ಷ ಮೂಡುಬಿದಿರೆ ನಗರ ಮೂಲದ ಮಹಮ್ಮದ್ ಅಸ್ಲಾಂರವರು ಗೌರವ ಅತಿಥಿಯಾಗಿ ಪಾಲ್ಗೊಂಡು, ರೋಟರ‌್ಯಾಕ್ಟ್ ಸಂಸ್ಥೆಯ ಯುವ ಸದಸ್ಯರು ಸಂಸ್ಥೆಯ ಧ್ಯೇಯ, ನೀತಿ, ಮಾಹಿತಿ, ಉದ್ದೇಶಗಳ ಜ್ಞಾನವನ್ನು ವೃದ್ಧಿಸಬೇಕು ಮತ್ತು ಸಂಸ್ಥೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಸಲಹೆ ನೀಡಿ ಸ್ಪರ್ಧಾ ವಿಜೇತರನ್ನು ಅಭಿನಂದಿಸಿದರು.


ರೋಟರ‌್ಯಾಕ್ಟ್ ಜಿಲ್ಲಾ ಪ್ರತಿನಿಧಿ ರಾಹುಲ್ ಆಚಾರ್ಯ, ಮಂಗಳೂರು ರೋಟರಿ ಸೆಂಟ್ರಲ್ ಸಂಸ್ಥೆಯ ಚುನಾಯಿತ ಅಧ್ಯಕ್ಷ ಬ್ರಯಾನ್ ಪಿಂಟೋ ಉಪಸ್ಥಿತರಿದ್ದರು.


ರೋಟರ‌್ಯಾಕ್ಟ್ ಮಂಗಳೂರು ಸಿಟಿ ಸಂಸ್ಥೆಯ ಅಧ್ಯಕ್ಷರಾದ ಅವಿನಾಶ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲೆಯ 6 ತಂಡಗಳು ಅಂತಿಮ ಮತ್ತು ನಿರ್ಣಾಯಕ ಸುತ್ತಿಗೆ ಪ್ರವೇಶ ಪಡೆದಿದ್ದವು. ಈ ಸ್ಪರ್ಧಾ ಕೂಟವನ್ನು ರೋಟರ‌್ಯಾಕ್ಟ್ ಮಂಗಳೂರು ಸಿಟಿ ಸಂಸ್ಥೆಯ ಸಭಾಪತಿ ಡಾ. ದೇವದಾಸ್ ರೈ ನಿರೂಪಿಸಿದರು.


ದಿ. ಶಾಂತಾರಾಮ್ ವಾಮಂಜೂರ್‌ರವರು ಸಂಸ್ಥೆಯ ನಿಷ್ಠಾವಂತ ಸದಸ್ಯರಾಗಿದ್ದು, ನಿಸ್ವಾರ್ಥ ಸೇವಾ ಮನೋಭಾವ ಹೊಂದಿದ್ದು, 2006ರಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಆಕಸ್ಮಿಕ ವಾಹನ ರಸ್ತೆ ಅಪಘಾತದ ದುರಂತದಲ್ಲಿ ವಿಧಿವಶರಾಗಿದ್ದರು. ಅವರ ಸ್ಮರಣಾರ್ಥ ಪ್ರತಿವರ್ಷ ವಾರ್ಷಿಕ ರೋಟರ‌್ಯಾಕ್ಟ್ ರಸಪ್ರಶ್ನೆ ಸ್ಪರ್ಧಾಕೂಟವನ್ನು ಆಯೋಜಿಸಲಾಗುವುದು ಎಂದು ಡಾ.ದೇವದಾಸ್ ರೈ ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net