

ಕುಶಾಲನಗರ:
ಕುಶಾಲನಗರ ತಾಲೂಕು ಕೂಡಿಗೆಯಲ್ಲಿರುವ ಸದ್ಗುರು ಅಪ್ಪಯ್ಯಸ್ವಾಮಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್ ವತಿಯಿಂದ ಸಮವಸ್ತ್ರ ಹಾಗೂ ಶೂ ವಿತರಣೆ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ಬುಧವಾರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ರೋಟರಿ ಸಂಸ್ಥೆಯ ಅಧ್ಯಕ್ಷ ಮನು ಪೇಮಯ್ಯ ನೆರವೇರಿಸಿದರು.
ನಂತರ ಮಾತನಾಡಿ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಕಲಿಕೆಯ ಮೂಲಕ ತಮ್ಮ ಪ್ರತಿಭೆ ಪ್ರದರ್ಶಿಸಲು ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ರೋಟರಿ ಸಂಸ್ಥೆ ತೊಡಗಿಸಿಕೊಂಡಿದೆ. ಈ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಸಂಗ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಸವಲತ್ತುಗಳನ್ನು ನೀಡಿ ವಿದ್ಯಾರ್ಜನೆಗೆ ಒತ್ತು ನೀಡಬೇಕು ಎಂಬುವ ಉದ್ದೇಶದಿಂದ ರೋಟರಿ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆ ವ್ಯವಸ್ಥಾಪಕ ಬೋಸ್ ಮೊಣ್ಣಪ್ಪ ಮಾತಾನಾಡಿ ಶಾಲೆ ಅಭಿವೃದ್ಧಿಗೆ ಮತ್ತು ವಿದ್ಯಾರ್ಥಿಗಳಿಗೆ ಸಹಕಾರ ನೀಡುವ ಮೂಲಕ ಪ್ರೊತ್ಸಾಹ ನೀಡುತ್ತಿರುವ ರೋಟರಿ ಸಂಸ್ಥೆಗೆ ಮಾದರಿ ಕಾರ್ಯ ಮಾಡುತ್ತಿದೆ ಎಂದರು.
ಈ ಸಂದರ್ಭದಲ್ಲಿ ರೋಟರಿ ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ್, ರೋಟರಿ ನಿಕಟ ಪೂರ್ವ ಅಧ್ಯಕ್ಷ ಎಸ್. ಕೆ. ಸತೀಶ್, ಶೋಭಾ ಸತೀಶ್. ಉಲ್ಲಾಸ್ ಕೃಷ್ಣ, ಸುನಿತಾ ಮಹೇಶ್, ರುದ್ರೇಶ್ ಪಟೇಲ್, ಚಂದ್ರಶೇಖರ್, ಸ್ಥಳೀಯ ಪ್ರಮುಖರಾದ ಕಲಾವತಿ, ಪ್ರಮೋದ್, ಚರಣ್, ಕುಮಾರ್, ದೀಕ್ಷಿತ್ ಮತ್ತಿತರು ಇದ್ದರು.