

ಮಂಗಳೂರು : ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ಧಾರೆ ಎರೆದು ಉಜ್ವಲ ಭವಿಷ್ಯ ಮತ್ತು ಉತ್ತಮ ಪ್ರಜೆಯಾಗಿ ರೂಪಿಸುವ ಶಿಕ್ಷಕರ ಪಾತ್ರ ಅಮೂಲ್ಯ ಎಂದು ರೋಟರಿ ಜಿಲ್ಲಾ ಸಹಾಯಕ ಗರ್ವನರ್ ಪಿ.ಡಿ. ಶೆಟ್ಟಿ ಹೇಳಿದರು.
ರೋಟರಿ ಮಂಗಳೂರು ಸಿಟಿ ಸಂಸ್ಥೆ ಜರಗಿದ ಶಿಕ್ಷಕರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿಮಾತನಾಡಿದ ಅವರು
ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಸಾಧಕರನ್ನಾಗಿ ಪರಿವರ್ತಿಸುವ ಹೊಣೆ ಶಿಕ್ಷಕರಲ್ಲಿದೆ ಎಂದರು.
ಇದೇ ಸಂದರ್ಭ ಬೆಸೆಂಟ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ಮೀನಾಕ್ಷಿ ರಾಮಚಂದ್ರ ಮತ್ತು ಕಾಸಿಯ ಹೈಸ್ಕೂಲ್‌ನ ನಿವೃತ್ತ ಶಿಕ್ಷಕಿಗ್ರೇಸಿ ಮರಿಯಾ ರೋಚ್ ಅವರ ಅನುಪಮ ಸೇವೆಯನ್ನು ಗುರುತಿಸಿ ಅಂತಾರಾಷ್ಟ್ರೀಯ ರೋಟರಿ ಸಂಸ್ಥೆ ಪ್ರಾಯೋಜಿಸಿದ ರೋಟರಿ ರಾಷ್ಟ್ರ ನಿರ್ಮಾತ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷ ಡಾ. ರಂಜನ್ ಮತ್ತು ಉಪಾಧ್ಯಕ್ಷ ಬಸವಕುಮಾರ್ ಪ್ರಶಸ್ತಿ ವಿಜೇತರ ಪರಿಚಯ ಮತ್ತು
ಸಾಧನೆಯ ವಿವರ ನೀಡಿದರು. ಆಯ್ಕೆ ಸಮಿತಿಯ ಸದಸ್ಯರಾದ ಸರಿತಾ ಡಿಸೋಜ,ಪ್ರತಿಭಾ ರಾವ್, ಮಂಗಳಾ ರೈ,
ರೂಪಾ ಮತ್ತು ಪದ್ಮನಾಭ ನಾಯಕ್ ಉಪಸ್ಥಿತರಿದ್ದರು. ರೋಟರಿ ಸಂಸ್ಥೆಯ ಅಧ್ಯಕ್ಷ ಪ್ರಶಾಂತ್ ರೈ ಸ್ವಾಗತಿಸಿ, ಕಾರ್ಯದರ್ಶಿ ಗಣೇಶ್ ವಂದಿಸಿದರು.