ಮಾನವೀಯ ಸೇವೆಯಲ್ಲಿ ರೋಟರಿ ಕೊಡುಗೆ ಅನನ್ಯ - ರೋಟರಿ ಗವರ್ನರ್ ವಿಕ್ರಮ್ ದತ್ತ

mng-11nov-rotary
Published on


ಮಂಗಳೂರು : ರೋಟರಿ ಕ್ಲಬ್ ಮಂಗಳೂರು ಪೂರ್ವ ಇದರ ಸಮುದಾಯ ಸೇವಾ ಯೋಜನೆಯ ಅಂಗವಾಗಿ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಸಹಯೋಗದಲ್ಲಿ ನಗರದ ರಾಮಕೃಷ್ಣ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ಅರ್ಹ ಪೋಷಕರಿಗೆ ಗಾಲಿಕುರ್ಚಿ ವಿತರಿಸಲಾಯಿತು.
ರೋಟರಿ ಜಿಲ್ಲೆ 3181 ಇದರ ಗವರ್ನರ್ ವಿಕ್ರಮ್ ದತ್ತ ಅವರು ರೋಟರಿ ಕ್ಲಬ್ ಮಂಗಳೂರು ಪೂರ್ವಕ್ಕೆ ಅಧಿಕೃತ ಭೇಟಿ ನೀಡಿದ ಸಂದರ್ಭ ಏರ್ಪಡಿಸಲಾದ ಸಮಾರಂಭದಲ್ಲಿ ಗಾಲಿಕುರ್ಚಿಗಳನ್ನು ಹಸ್ತಾಂತರಿಸಲಾಯಿತು.
ನಿಸ್ವಾರ್ಥ ಸೇವೆಯಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಸಮಾಜ ಸೇವೆ ರೋಟರಿ ಸಂಸ್ಥೆಯ ಧ್ಯೇಯವಾಗಿದ್ದು, ಸಾಮಾಜಿಕ ಬದ್ಧತೆ ಮತ್ತು ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ದೇಶಕ್ಕೆ ನೀಡಿದ ಕೊಡುಗೆ ಅನನ್ಯವಾಗಿದೆ ಎಂದು ಅವರು ಹೇಳಿದರು.
ರೋಟರಿ ಜಿಲ್ಲೆ 3181ಅಸಿಸ್ಟೆಂಟ್ ಗವರ್ನರ್ ವಿಶ್ವನಾಥ ಶೆಟ್ಟಿ ,ರೆನಲ್ ಲೆಫ್ಟಿನೆಂಟ್ ಸಿಎ ಹರೀಶ್ ಶೆಟ್ಟಿ ರೋಟರಿ ಕ್ಲಬ್ ಮಂಗಳೂರು ಪೂರ್ವದ ಅಧ್ಯಕ್ಷ ಗೋಪಾಲ್ ಶೆಟ್ಟಿ, ಕಾರ್ಯದರ್ಶಿ ರಾಘವೇಂದ್ರ.ಎನ್., ನಿಕಟಪೂರ್ವ ಅಧ್ಯಕ್ಷ ಜಯರಾಮ ಶೆಟ್ಟಿ , ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ, ನಿರ್ದೇಶಕ ಪಿ.ಬಿ.ಹರೀಶ್ ರೈ, ರಾಮಕೃಷ್ಣ ಕಾಲೇಜಿನ ಯೂತ್ ರೆಡ್‌ಕ್ರಾಸ್ ಘಟಕದ ಸಂಯೋಜಕ ನಟೇಶ್ ಆಳ್ವ ಉಪಸ್ಥಿತರಿದ್ದರು.
ಸಂತೋಷ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net