ನವನಗರದಲ್ಲಿ ಕೌಶಲ ಅಭಿವೃದ್ಧಿ ಕೇಂದ್ರ ಉದ್ಘಾಟನೆ

IMG_20250816_211523_887.jpg
Published on

ಹುಬ್ಬಳ್ಳಿ: ಇಲ್ಲಿಯ ನವನಗರ ರೋಟರಿ ಎಜ್ಯುಕೇಶನ್ ಸೊಸೈಟಿ ವತಿಯಿಂದ- ಕಂಪ್ಯೂಟರ್ ಮತ್ತು ಕೌಶಲ ಅಭಿವೃದ್ಧಿ ಕೇಂದ್ರ ಹಾಗೂ ಪ್ರಾಥಮಿಕ ಶಿಕ್ಷಕರ ತರಬೇತಿ ಕೇಂದ್ರವನ್ನು ಆರಂಭಿಸಲಾಯಿತು.

ಖ್ಯಾತ ಮಕ್ಕಳ ತಜ್ಞ ಡಾ. ರಾಜನ್ ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ಕಂಪ್ಯೂಟರ್ ಶಿಕ್ಷಣ ಬಹಳಷ್ಟು ಪ್ರಭಾವಶಾಲಿ ಹಾಗೂ ಮಹತ್ವಪೂರ್ಣವಾಗಿದೆ. ಇದರ ಬಗ್ಗೆ ವಿದ್ಯಾರ್ಥಿಗಳು ಗಮನ ಹರಿಸಬೇಕು ಎಂದರು.

ರೋಟರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಬಿ.ಎಸ್. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ದಾನಿಗಳಾದ ಸುಪ್ರಿಯಾ ಹೊಸಮಠ ಅವರನ್ನು ರೋಟರಿ ಶಿಕ್ಷಣ ಸಂಸ್ಥೆಯ ಪ್ರಾಚಾರ್ಯ ವಿಜಯಶ್ರೀ ಕಲಬುರ್ಗಿ ಸನ್ಮಾನಿಸಿದರು.

ಗಣಕಯಂತ್ರ ವಿಭಾಗದ ಚೇರ್ಮನ್ ಡಾ. ಎನ್.ವಿ. ಸಾನು ಅವರು, ರೋಟರಿ ಕಂಪ್ಯೂಟರ್ ಸಾಕ್ಷರತಾ ಸಮಿತಿಯ ಕಾರ್ಯಗಳು, ಉದ್ದೇಶಗಳ ಕುರಿತು ಮಾತನಾಡಿದರು.

ರೋಟರಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಕೆ.ಪಿ. ಅಣ್ಣಿಗೇರಿ ಪರಿಚಯಿಸಿದರು. ಬಸವರಾಜ ಗೊಜನೂರ ಕಾರ್ಯಕ್ರಮ ನಿರೂಪಿಸಿದರು, ನೀತಾ ಜಾಧವ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net