ರೋಟರಿಯಿಂದ ಅಂಗನವಾಡಿಗೆ ಪರಿಕರ ವಿತರಣೆ

4ss1samagri vitarane
ಆಲೂರುಸಿದ್ದಾಪುರ ರೋಟರಿ ಮಲ್ಲೇಶ್ವರ ಸಂಸ್ಥೆಯಿಂದ ಹೊಸಗುತ್ತಿ ಅಂಗನವಾಡಿ ಕೇಂದ್ರಕ್ಕೆ ಅಗತ್ಯ ಪರಿಕರ ವಿತರಿಸಲಾಯಿತು. ನಾರಾಯಣಸ್ವಾಮಿ, ರಾಮಣ್ಣ, ಕಿರಣ್, ದಯಾನಂದ್, ರಾಜೇಶ್ವರಿ ಇದ್ದರು.
Published on

ಶನಿವಾರಸಂತೆ: ಸಮೀಪದ ಆಲೂರುಸಿದ್ದಾಪುರ ರೋಟರಿ ಮಲ್ಲೇಶ್ವರ ಸಂಸ್ಥೆ ಮತ್ತು ಜಿಲ್ಲಾ ರೋಟರಿ ಸಂಸ್ಥೆಯ ಸಹಯೋಗದಲ್ಲಿ ಹೊಸಗುತ್ತಿ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಕುರ್ಚಿ, ಟೇಬಲ್, ಕ್ರೀಡಾ ಪರಿಕರ ಮತ್ತು ಲೇಖನ ಸಾಮಗ್ರಿ ವಿತರಿಸಲಾಯಿತು.

ರೋಟರಿ ಕ್ಲಬ್ ಅಧ್ಯಕ್ಷ ಎಚ್.ನಾರಾಯಣಸ್ವಾಮಿ ಮಾತನಾಡಿ, ರೋಟರಿ ಸಂಸ್ಥೆ ಸಮಾಜ ಸೇವೆಗೆ ಹೆಸರಾದ ಏಕೈಕ ಸಂಸ್ಥೆ. ಶಿಕ್ಷಣ, ಆರೋಗ್ಯ, ಅರಣ್ಯ ಪರಿಸರದ ಬಗ್ಗೆ ಕಾಳಜಿ ಹೊಂದಿದೆ ಈ ನಿಟ್ಟಿನಲ್ಲಿ ರೋಟರಿ ಸಂಸ್ಥೆಯ ವಿವಿಧ ಯೋಜನೆಯಡಿ ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಕ್ರೀಡಾ ಪರಿಕರ, ಪೀಠೋಪಕರಣಗಳ ವಿತರಣೆ ಸೇರಿದಂತೆ ಮಕ್ಕಳಿಗೆ ಪುಸ್ತಕ, ಲೇಖನಿ ಸಾಮಗ್ರಿ ವಿತರಿಸುವ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಹಕರಿಸುತ್ತಿದೆ ಎಂದು ಹೇಳಿದರು.

ರೋಟರಿ ಸಂಸ್ಥೆಯ ವಲಯ ಸೇನಾನಿ ಎ.ಎಸ್.ರಾಮಣ್ಣ ಮಾತನಾಡಿದರು. ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆ ಕಾರ್ಯದರ್ಶಿ ಎಚ್.ಕೆ.ಕಿರಣ್, ಸದಸ್ಯರಾದ ಎಚ್.ಇ.ತಮ್ಮಯ್ಯ, ಟಿ.ಪಿ.ಸಂಪತ್, ಜಿತೇಂದ್ರ, ಟಿ.ವಿ.ದಯಾನಂದ್, ಸತೀಶ್‌ಕುಮಾರ್, ಅಂಗನವಾಡಿ ಕೇಂದ್ರದ ಶಿಕ್ಷಕಿ ರಾಜೇಶ್ವರಿ, ವನಜಾಕ್ಷಿ, ಪಾಲಕರು, ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net