ಕಬಡ್ಡಿ ತಂಡಕ್ಕೆ ರೋಟರಿಯಿಂದ ಸಮವಸ್ತ್ರ ಹಸ್ತಾಂತರ

New Project (33)
Published on

ಸುಬ್ರಹ್ಮಣ್ಯ: ಗ್ರಾಮೀಣ ಕ್ರೀಡಾಳುಗಳು ಸದಾ ಪರಿಶ್ರಮಯುತ ಅಭ್ಯಾಸಕ್ಕೆ ಒತ್ತು ನೀಡಬೇಕು. ಕ್ರೀಡಾ ಕ್ಷೇತ್ರಕ್ಕೆ ನೀಡುವ ಕೊಡುಗೆಗಳು ಕ್ರೀಡಾಳುಗಳಿಗೆ ಸಾಧನೆ ಮಾಡಲು ಸ್ಫೂರ್ತಿ ಚಿಲುಮೆಯಾಗುತ್ತದೆ ಎಂದು ಎಸ್‌ಎಸ್‌ಪಿಯು ಕಾಲೇಜು ಪ್ರಾಚಾರ್ಯ ಸೋಮಶೇಖರ್ ನಾಯಕ್ ಹೇಳಿದರು.

14ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ಎಸ್‌ಎಸ್‌ಪಿಯು ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಕೊಡಮಾಡಿದ ಕ್ರೀಡಾ ಸಮವಸ್ತ್ರ ಶನಿವಾರ ವಿತರಿಸಿ ಮಾತನಾಡಿದರು.

ಸುಬ್ರಹ್ಮಣ್ಯ ರೋಟರಿ ಅಧ್ಯಕ್ಷ ಜಯಪ್ರಕಾಶ್ ಆರ್. ಅಧ್ಯಕ್ಷತೆ ವಹಿಸಿದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ನಂದಾ ಹರೀಶ್, ದೈಹಿಕ ಶಿಕ್ಷಣ ಶಿಕ್ಷಕಿ ಸ್ಮಿತಾ, ಕಾಲೇಜು ಸಾಂಸ್ಕೃತಿಕ ತಂಡದ ಸಂಚಾಲಕಿ ರೇಖಾರಾಣಿ ಸೋಮಶೇಖರ್, ಶಿಕ್ಷಕ ಸುರೇಶ್, ಉಪನ್ಯಾಸಕರಾದ ಸವಿತಾ ಕೈಲಾಸ್, ಚಂದ್ರಶೇಖರ್ ಶೆಟ್ಟಿ, ಪ್ರೆಸ್‌ಕ್ಲಬ್ ಅಧ್ಯಕ್ಷ ರತ್ನಾಕರ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net