

ಬನ್ನೂರು : ಪಟ್ಟಣದ ಬಸ್‌ನಿಲ್ದಾಣದ ಸಮೀಪವಿರುವ ರೋಟರಿ ಶಾಲೆಯ ಆವರಣದಲ್ಲಿ ರೋಟರಿ ಸಂಸ್ಥೆಯಿಂದ ಮಾ.12ರಂದು ಕಣ್ಣಿನ ಉಚಿತ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಅಂದು ಮಧ್ಯಾಹ್ನ 1 ರಿಂದ 4 ಗಂಟೆವರೆಗೆ ಉಚಿತ ತಪಾಸಣೆ ಹಮ್ಮಿಕೊಳ್ಳಲಾಗಿದ್ದು, ತಪಾಸಣೆಗೆ ಬರುವವರು ಆಧಾರ್‌ಕಾರ್ಡ್ ಜೆರಾಕ್ಸ್ ಪ್ರತಿ ತರಲು ಸೂಚಿಸಲಾಗಿದೆ. ಕಣ್ಣಿನ ಪೊರೆ, ಗ್ಲಾಕೋಮ, ನೀರು ಸೋರುವಿಕೆ, ಕಣ್ಣಿನಲ್ಲಿ ಗೀಜು ಬರುವುದು, ಹತ್ತಿರ ಮತ್ತು ದೂರ ದೃಷ್ಠಿ ದೋಷ, ಕಣ್ಣಿನಲ್ಲಿ ಬಿರುಕು, ವಾರೆ ಕಣ್ಣು, ರಾತ್ರಿ ಕುರುಡುತನ ಇತ್ಯಾದಿ ಸಮಸ್ಯೆಗೆ ತಜ್ಞರು ಚಿಕಿತ್ಸೆ ನೀಡಲಿದ್ದಾರೆ. ಕಣ್ಣಿನ ಪೊರೆ ಇರುವವರನ್ನು ಕೊಯಮತ್ತೂರು ಕಣ್ಣಿನ ಆಸ್ಪತ್ರೆಗೆ ಉಚಿತವಾಗಿ ಕರೆದುಕೊಂಡು ಹೋಗಿ, ಶಸ್ತ್ರ ಚಿಕಿತ್ಸೆ ಮಾಡಿಸಿ ಪುನಃ ಸ್ವ ಸ್ಥಳಕ್ಕೆ ತಂದು ಬಿಡಲಾಗುವುದು ಎಂದು ರೋಟರಿ ಸಂಸ್ಥೆ ಪ್ರಕಟಣೆ ತಿಳಿಸಿದೆ.