

ವಿಜಯವಾಣಿ ಸುದ್ದಿಜಾಲ ಬಂಟ್ವಾಳ
ಈ ಹಿಂದೆ ಹಲವಾರು ಸಂಕಷ್ಟ, ಕಾನೂನು ತೊಡಕುಗಳನ್ನು ಎದುರಿಸುತ್ತಾ ಬಂದಿರುವ ಕಂಬಳಕ್ಕೆ ಪ್ರಸಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಗೊಂಡ ದಿಟ್ಟ ನಿರ್ಧಾರದಿಂದ ಕ್ರೀಡಾ ಮಾನ್ಯತೆ ದೊರಕಿದ್ದು, ಮುಂಬರುವ ಬಜೆಟ್ನಲ್ಲಿ ಹೆಚ್ಚಿನ ಅನುದಾನ ಗಿಟ್ಟಿಸಿಕೊಳ್ಳಲು ಸಹಕಾರಿಯಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಸಿದ್ದಕಟ್ಟೆ ಕೊಡಂಗೆಯಲ್ಲಿ ಭಾನುವಾರ ರಾತ್ರಿ ಸಮಾರೋಪಗೊಂಡ ಎರಡನೇ ವರ್ಷದ ರೋಟರಿ ಕಂಬಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಗತಿಪರ ಕೃಷಿಕ ಸುರೇಶ ಬಳ್ನಾಡು, ಕಂಬಳದ ಸಾರಥ್ಯ ವಹಿಸಿದ್ದ ಮಾಜಿ ಸಹಾಯಕ ಗವರ್ನರ್ ಎಲ್ಯಾಸ್ ಸ್ಯಾಂಕ್ಟಿಸ್, ಮಾಜಿ ಜಿಲ್ಲಾ ಗವರ್ನರ್ ಎನ್.ಪ್ರಕಾಶ ಕಾರಂತ ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಕಂಬಳ ಸಮಿತಿ ಗೌರವಾಧ್ಯಕ್ಷ ರೋಹಿತ್ ಹೆಗ್ಡೆ ಎರ್ಮಾಳ್ ಮಾತನಾಡಿದರು. ಜಿಲ್ಲಾ ಸಮಿತಿ ಮಾಜಿ ಅಧ್ಯಕ್ಷ ಪಿ.ಆರ್.ಶೆಟ್ಟಿ ಕೂಳೂರು, ಜಿಲ್ಲಾ ಶಿಸ್ತು ಸಮಿತಿ ಅಧ್ಯಕ್ಷ ಭಾಸ್ಕರ ಎಸ್.ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ಲೋಕೇಶ ಶೆಟ್ಟಿ ಮುಚ್ಚೂರು, ರೋಟರಿ ಮಾಜಿ ಜಿಲ್ಲಾ ಗವರ್ನರ್ ಕೃಷ್ಣ ಶೆಟ್ಟಿ, ಡಾ.ದೇವದಾಸ್ ರೈ ಶುಭ ಹಾರೈಸಿದರು. ಸಹಾಯಕ ಗವರ್ನರ್ ಡಾ.ಜಯ ಕುಮಾರ್ ಶೆಟ್ಟಿ, ಕೆ.ಪದ್ಮನಾಭ ರೈ, ಉಮೇಶ್ ರಾವ್ ಮಿಜಾರು, ನಾರಾಯಣ ಹೆಗ್ಡೆ, ರಾಜಗೋಪಾಲ ರೈ, ಡಾ.ಆತ್ಮರಂಜನ್ ರೈ, ಜಯರಾಮ ರೈ, ಅಶ್ವನಿ ಕುಮಾರ್ ರೈ, ಡಾ.ಸೂರ್ಯನಾರಾಯಣ ಕುಕ್ಕಾಡಿ, ಡಾ.ಶಿವಪ್ರಸಾದ್, ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಸ್ಥಾಪಕಾಧ್ಯಕ್ಷ ಅವಿಲ್ ಮಿನೇಜಸ್, ಮಾಜಿ ಅಧ್ಯಕ್ಷ ಎಂ.ಪದ್ಮರಾಜ ಬಲ್ಲಾಳ್, ಬಂಟ್ವಾಳ ಕ್ಲಬ್ ಅಧ್ಯಕ್ಷ ಬಸ್ತಿ ಮಾಧವ ಶೆಣೈ, ಕಾರ್ಯದರ್ಶಿ ಯಾಸೀರ್ ಕಲ್ಲಡ್ಕ ಮತ್ತಿತರರಿದ್ದರು.
ಲೊರೆಟ್ಟೊ ಹಿಲ್ಸ್ ಕ್ಲಬ್ ಅಧ್ಯಕ್ಷ ವಿಜಯ ಫರ್ನಾಂಡಿಸ್ ಸ್ವಾಗತಿಸಿದರು. ಕಾರ್ಯದರ್ಶಿ ಮೋಹನ್ ಕೆ.ಶ್ರೀಯಾನ್ ರಾಯಿ ವಂದಿಸಿದರು. ಕ್ಲಬ್ನ ಮಾಜಿ ಅಧ್ಯಕ್ಷರಾದ ಸುರೇಶ ಶೆಟ್ಟಿ ಸಿದ್ಧಕಟ್ಟೆ, ರಾಘವೇಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು.
ಅವಿಭಜಿತ ಜಿಲ್ಲೆಯಲ್ಲಿ ನಡೆಯುವ ಕಂಬಳ ಕೂಟಗಳಿಂದ ಸರ್ಕಾರಕ್ಕೆ ಪರೋಕ್ಷವಾಗಿ ಲಕ್ಷಾಂತರ ಮೊತ್ತದ ತೆರಿಗೆ ಸಂಗ್ರಹವಾಗುತ್ತಿದ್ದು, ಮುಂಬರುವ ಬಜೆಟ್ನಲ್ಲಿ ಅನುದಾನ ಮೀಸಲಿಡುವುದರ ಜತೆಗೆ ಭವಿಷ್ಯದಲ್ಲಿ ಕ್ರಿಕೆಟ್ ಪ್ರೀಮಿಯರ್ ಲೀಗ್ ಮಾದರಿ ಕಂಬಳ ನಡೆಯಬಹುದು. ರೋಹಿತ್ ಹೆಗ್ಡೆ ಎರ್ಮಾಳ್ ಜಿಲ್ಲಾ ಕಂಬಳ ಸಮಿತಿ ಗೌರವಾಧ್ಯಕ್ಷ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಸಹಿತ ಬಂಟ್ವಾಳ, ಮೊಡಂಕಾಪು, ಸಿದ್ದಕಟ್ಟೆ ಲ್ಗುಣಿ, ಮಂಗಳೂರು ಸೆಂಟ್ರಲ್ ರೋಟರಿ ಕ್ಲಬ್ ಸಹಭಾಗಿತ್ವ ವಹಿಸಿಕೊಳ್ಳುವ ಮೂಲಕ ಜಾಗತಿಕ ಮಟ್ಟದಲ್ಲಿ ಗ್ರಾಮೀಣ ಕೃಷಿಕರ ಕ್ರೀಡೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಬಿ.ರಮಾನಾಥ ರೈ, ಮಾಜಿ ಸಚಿವ