ರೋಟರಿ ನೇಷನ್ ಬಿಲ್ಡರ್ಸ್ ಪ್ರಶಸ್ತಿ ಪ್ರದಾನ

netion award
Published on

ಮಡಿಕೇರಿ: ರೋಟರಿ ಮಡಿಕೇರಿ ವತಿಯಿಂದ ನಗರದ ಸರ್ಕಾರಿ ಜೂನಿಯರ್ ಕಾಲೇಜ್‌ನ ಪ್ರಾಂಶುಪಾಲ ಪಿ.ಆರ್.ವಿಜಯ್ ಹಾಗೂ ಸಂತ ಜೋಸೆಫರ ಶಾಲೆಯ ಶಿಕ್ಷಕಿ ಮಂಡೇಟಿರ ಡೈಜಿ ಸೋಮಯ್ಯ ಅವರಿಗೆ ನೇಷನ್ ಬಿಲ್ಡ್‌ರ್ಸ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಇದೇ ಸಂದರ್ಭ ಹಾಕಿ ಕ್ರೀಡೆಯಲ್ಲಿ ಸಾಧನೆ ತೋರಿದ ಕೊಡಗು ವಿದ್ಯಾಲಯದ ವಿದ್ಯಾರ್ಥಿನಿ ಎ.ಜಿ.ಪರ್ಲಿನ್ ಪೊನ್ನಮ್ಮ ಅವರನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು. ರೋಟರಿ ಅಧ್ಯಕ್ಷ ಸುದಯ್ ನಾಣಯ್ಯ, ಕಾರ್ಯದರ್ಶಿ ಪ್ರಿನ್ಸ್ ಪೊನ್ನಣ್ಣ ಮತ್ತಿತರ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net