ಹೆಲ್ಮೆಟ್ ಧರಿಸಲು ರೋಟರಿ ಸಂಸ್ಥೆಯಿಂದ ಜಾಗೃತಿ

30-GPT-2
ಜಾಗೃತಿ.
Published on

ಗುಂಡ್ಲುಪೇಟೆ: ಚಾಮರಾಜನಗರ ರೋಟರಿ ಸಂಸ್ಥೆಯ ಜೀವರಕ್ಷಕ ತಂಡದ ವತಿಯಿಂದ ಶನಿವಾರ ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ರಸ್ತೆ ಸುರಕ್ಷತೆ ಮತ್ತು ಹೆಲ್ಮೆಟ್ ಧರಿಸುವ ಬಗ್ಗೆ ರ‌್ಯಾಲಿ ನಡೆಸುವ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.

ಸಬ್ ಇನ್ಸ್‌ಪೆಕ್ಟರ್ ಕೆ.ಎಂ.ಮಹೇಶ್ ಮಾತನಾಡಿ, ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವುದರಿಂದ ಆಕಸ್ಮಿಕ ಅಪಘಾತಗಳಲ್ಲಿ ಜೀವ ಉಳಿಸಿಕೊಳ್ಳಬಹುದು ಎಂದು ತಿಳಿಸಿದರು. ಜೀವರಕ್ಷಕ ತಂಡದ ಸದಸ್ಯರು ಹಾಗೂ ಸಾರ್ವಜನಿಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net