ನವನಗರ ರೋಟರಿ ಶಾಲೆ ಕ್ರೀಡಾಕೂಟ

Published on

ಹುಬ್ಬಳ್ಳಿ: ಇಲ್ಲಿಯ ನವನಗರದ ರೋಟರಿ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಆಯೋಜಿಸಲಾಗಿತ್ತು.

ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಕಠಿಣ ಪರಿಶ್ರಮ, ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳು ಸದಾ ಕ್ರಿಯಾಶೀಲರಾಗಿರಬಹುದು. ಸಂವಿಧಾನದ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕೆಂದು ಹೇಳಿದರು.

ನವನಗರ ರೋಟರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಬಿ.ಎಸ್. ಪಾಟೀಲ, ಕಾರ್ಯದರ್ಶಿ ಡಾ. ಕೆ.ಪಿ. ಅಣ್ಣಿಗೇರಿ, ಕ್ರೀಡಾ ಸಮಿತಿ ಅಧ್ಯಕ್ಷ ಶಶಿಕಾಂತ ಮಾಳಾಪುರ, ಪ್ರಾಚಾರ್ಯ ಡಾ. ವಿಜಯಶ್ರೀ ಕಲಬುರ್ಗಿ, ಸಂಸ್ಥೆಯ ನಿರ್ದೇಶಕರು, ಸದಸ್ಯರು ಪಾಲ್ಗೊಂಡಿದ್ದರು.

ಬಸವರಾಜ ಗೊಜನೂರ ಕಾರ್ಯಕ್ರಮ ನಿರೂಪಿಸಿದರು. ಮಂಜುಳಾ ಮುದ್ದೇಬಿಹಾಳ ವಂದಿಸಿದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net