ಶನಿವಾರಸಂತೆ : ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ ರೋಟರಿ ಸಂಸ್ಥೆ ಕಾರ್ಯಕ್ರಮದಲ್ಲಿ ಶನಿವಾರಸಂತೆ ಸಮೀಪದ ಆಲೂರುಸಿದ್ದಾಪುರ ರೋಟರಿ ಮಲ್ಲೇಶ್ವರ ಸಂಸ್ಥೆಗೆ ಗೋಲ್ಡನ್ ಅವಾರ್ಡ್ ನೀಡಿ ಗೌರವಿಸಲಾಗಿದೆ. ಘಟಕದ ಅಧ್ಯಕ್ಷ ದಯಾನಂದ ಮತ್ತು ಕಾರ್ಯದರ್ಶಿ ಕಿರಣ್ ಅವರು ರೋಟರಿ ಜಿಲ್ಲಾ ಪ್ರಾಂತಪಾಲ ವಿಕ್ರಮ್‌ದತ್ತ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.