

ಮಂಗಳೂರು: ಕುಖ್ಯಾತ ರೌಡಿ, ಪೊಲೀಸರ ಗುಂಡೇಟಿನಿಂದ ಕಾಲಿಗೆ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಹಿದಾಸ್ ಯಾನೆ ಆಕಾಶಭವನ ಶರಣ್ (37) ಈತನಿಗೆ ಆಶ್ರಯ ನೀಡಿದ 7 ಮಂದಿ ವಿರುದ್ಧ ವಿವಿಧ ಠಾಣೆಗಳಲ್ಲಿ ಒಟ್ಟು 5 ಪ್ರಕರಣ ದಾಖಲಿಸಲಾಗಿದೆ.
ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಶರಣ್ ಪತ್ತೆಗೆ ಸಿಸಿಬಿ ಪೊಲೀಸರು 20 ದಿನಗಳಿಂದ ಕಾರ್ಯಾಚರಣೆ ನಡೆಸಿದೆ. ಆತನಿಗೆ ತಲೆಮರೆಸಿಕೊಳ್ಳಲು ವಿವಿಧ ಕಡೆ ಹಲವರು ಸಹಾಯ ಮಾಡಿದ್ದಾರೆ.'
ಕೋಡಿಕಲ್‌ನ ಶೀಲಾ, ಉಡುಪಿ ಸಂತೆಕಟ್ಟೆಯ ಶರತ್ ಭಂಡಾರಿ ಹಾಗೂ ಆತನ ಪತ್ನಿ ಮಯೂರಿ ಭಂಡಾರಿ, ಧನಂಜಯ ಹಾಗೂ ಚೇತನ್ ಬುಳ್ಳ ಎಂಬವರ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ, ಶಿವ ಕರ್ಬಿಸ್ಥಾನ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆ, ಶಾನು ಶೆಟ್ಟಿ ಎಂಬಾತನ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ತನಿಖೆಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಚೇತರಿಸಿಕೊಂಡ ಬಳಿಕ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ವಿಚಾರಣೆಗೆ ಕಸ್ಟಡಿಗೆ ಪಡೆದುಕೊಳ್ಳುವ ಸಾಧ್ಯತೆ ಇದೆ.