

ರಾಮನಗರ: ರೌಡಿ ಶೀಟರ್ ಒಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆಯ ಕೆರೆಮೇಗಳದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಕೈಲಾಂಚ ಹೋಬಳಿಯ ಕೆರೆಮೇಗಳದೊಡ್ಡಿ ಗ್ರಾಮದ ರೌಡಿಶೀಟರ್ ಲೋಕೇಶ್ (38) ಹತ್ಯೆಯಾದವನು.
ಶನಿವಾರ ರಾತ್ರಿ ಲೋಕೇಶ್ ಮನೆ ಬಳಿಯೇ ಹತ್ಯೆ ಮಾಡಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಪೊಲೀಸರು ಸ್ಥಳದಲ್ಲಿ ಮೊಕ್ಕಂ ಹೂಡಿದ್ದು ಕೊಲೆಗಾರರ ಪತ್ತೆಗೆ ಬಲೆ ಬೀಸಿದ್ದಾರೆ. ಸ್ಥಳಕ್ಕೆ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಡಿವೈಎಸ್ಪಿ ದಿನಕರ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಲೆಯಾದ ಲೋಕೇಶ್ ವಿರುದ್ಧ ಹಲವು ಪ್ರಕರಣಗಳು ರಾಮನಗರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿವೆ ಎನ್ನಲಾಗಿದೆ.
ಲೋಕೇಶ್ ಶವವನ್ನ ಮರಣೋತ್ತರ ಪರೀಕ್ಷೆಗಾಗಿ ರಾಮನಗರ ಜಿಲ್ಲಾ ಆಸ್ಪತ್ರೆಗೆ ಸಾಗಿಸಿದ್ದಾರೆ.