ಕಲಬುರಗಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್ ಬರ್ಬರ ಹತ್ಯೆ

IMG-20241112-WA0015
Published on

ಕಲಬುರಗಿ: ರೌಡಿ ಶೀಟರ್ ಒಬ್ಬನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ ಹೊರವಲಯದ ಆಳಂದ ರಸ್ತೆಯಲ್ಲಿ ಸಂಭವಿಸಿದೆ.

ಸೋಮು ತಾಳಿಕೋಟೆ (40) ಬರ್ಬರವಾಗಿ ಕೊಲೆಯಾದ ರೌಡಿ ಶೀಟರ್. ಪಟ್ಟಣ ಗ್ರಾಮದಲ್ಲಿ ಕೊಲೆ ಮಾಡಿ ಆಳಂದ ರಸ್ತೆಯ ರೈಲ್ವೆ ಹಳಿ ಬಳಿ ದೇಹವನ್ನು ಬಿಸಾಕಲಾಗಿದೆ.

ಸೋಮು ತಾಳಿಕೊಟೆ ಕಲಬುರಗಿ ತಾಲ್ಲೂಕಿನ ಪಟ್ಟಣ ಗ್ರಾಮದ ನಿವಾಸಿಯಾಗಿದ್ದಾನೆ. ಕೆಲ ತಿಂಗಳ ಹಿಂದೆ ಪಟ್ಟಣ ಗ್ರಾಮದ ಧಾಬಾ ಮಾಲೀಕರ ಜೊತೆ ಸೋಮು ಗಲಾಟೆ ಮಾಡಿಕೊಂಡಿದ್ದ.

ಧಾಬಾ ಮಾಲೀಕನ ಮೇಲೆ ಸೋಮು ಮತ್ತು ಆತನ ಗ್ಯಾಂಗ್ ಹಲ್ಲೆ ಮಾಡಿತ್ತು.

ಹಳೆಯ ವೈಷಮ್ಯದ ಹಿನ್ನಲೆ ಕೊಲೆ ಮಾಡಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net