ಜೈಲಿಂದ ಬಿಡುಗಡೆಯಾದ ಕೆಲವೇ ಹೊತ್ತಿನಲ್ಲಿ ರೌಡಿಶೀಟರ್ ಹತ್ಯೆ

Rowdysheeter
Published on

ಬೆಂಗಳೂರು: ಜೈಲಿನಿಂದ ಬಿಡುಗಡೆಯಾದ ಕೆಲವೇ ಹೊತ್ತಿನಲ್ಲಿ ರೌಡಿಶೀಟರ್​ ಒಬ್ಬನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರು ನಗರದ ಪರಪ್ಪನ ಅಗ್ರಹಾರ ಪೊಲೀಸ್​ ಠಾಣೆ ವ್ಯಾಪ್ತಿಯ ಹೊಸ ರೋಡ್ ಜಂಕ್ಷನ್ ಬಳಿ ನಡೆದಿದೆ.

ಸಿದ್ದಾಪುರ ಮಹೇಶ್​ ಹತ್ಯೆಯಾದ ರೌಡಿಶೀಟರ್​ ಎಂದು ತಿಳಿದು ಬಂದಿದೆ. ಮಹೇಶ್ ಕುಖ್ಯಾತ ರೌಡಿಶೀಟರ್​ ವಿಲ್ಸನ್ ಗಾರ್ಡನ್ ನಾಗನ ವಿರೋಧಿ ಗ್ಯಾಂಗ್ ಲೀಡರ್ ಆಗಿದ್ದ ಎಂದು ವರದಿಯಾಗಿದೆ.

ಹೊಸ ರೋಡ್​ ಜಂಕ್ಷನ್​ ಬಳಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಮಹೇಶನ ಮೇಲೆ ಅಟ್ಯಾಕ್​ ಮಾಡಿದ ಆರೋಪಿಗಳು ಮನಸೋಇಚ್ಛೆ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ವಿರುದ್ಧ ತನಿಖೆ ನಡೆಸುತ್ತಿದ್ಧಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net