

ಹುಬ್ಬಳ್ಳಿ: ರೌಡಿಶೀಟರನೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಯ ಮಂಟೂರ ರಸ್ತೆಯ ಅಂಬೇಡ್ಕರ್ ಕಾಲನಿಯಲ್ಲಿ ನಡೆದಿದೆ.
ಬಾಲಾಜಿ (24) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕುಡಿದ ಅಮಲಿನಲ್ಲಿ ಮನೆಯಲ್ಲಿ ಪೆಟ್ರೋಲ್ ಸುರಿದಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಾಜಿಯನ್ನು ಕೆಎಂಸಿಆರ್‌ಐನಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಡಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.