

ಶಿವಮೊಗ್ಗ: ಭದ್ರಾವತಿಯಲ್ಲಿ ನಾಲ್ಕು ದಿನಗಳ ಅಂತರದಲ್ಲಿ ಮತ್ತೊಮ್ಮೆ ಪೊಲೀಸರ ಪಿಸ್ತೂಲ್ ಸದ್ದು ಮಾಡಿದೆ. ಕೊಲೆ ಯತ್ನ ಸೇರಿ 12 ಪ್ರಕರಣಗಳಲ್ಲಿ ಭಾಗಿಯಾಗಿರುವ ರೌಡಿಶೀಟರ್ ಶಾಹೀದ್‌ನ ಕಾಲಿಗೆ ಗುಂಡಿನ ರುಚಿ ತೋರಿದ್ದಾರೆ.
ಭದ್ರಾವತಿಯ ಪೇಪರ್‌ಟೌನ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಗ್ಗೆ ಪೊಲೀಸ್ ಪೇದೆ ನಾಗರಾಜ್ ಅವರ ಮೇಲೆ ಹಲ್ಲೆ ಯತ್ನಿಸಿದ್ದ ರೌಡಿಶೀಟರ್ ಶಾಹೀದ್ ಕಾಲಿಗೆ ಇನ್‌ಸ್ಪೆಕ್ಟರ್ ನಾಗಮ್ಮ ಗುಂಡು ಹಾರಿಸಿದ್ದಾರೆ. ಬಳಿಕ ಪೊಲೀಸರು ಆತನನ್ನು ವಶಕ್ಕೆ ಪಡೆದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೇಪರ್‌ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫೆ.21ರಂದು ಹೊಸಮನೆ ಪೊಲೀಸ್ ಠಾಣೆ ಪೊಲೀಸರು ಗುಂಡಾ ಅಲಿಯಾಸ್ ರವಿ ಎಂಬಾತನ ಕಾಲಿಗೆ ಗುಂಡು ಹೊಡೆದಿದ್ದರು. ಶಾಹೀದ್ ಮೇಲೆ ಫೈರೀಂಗ್ ಆಗಿರುವ ಬಗ್ಗೆ ಎಸ್‌ಪಿ ಜಿ.ಕೆ.ಮಿಥುನ್‌ಕುಮಾರ್ ಮಾಹಿತಿ ನೀಡಿದ್ದಾರೆ.