ರೌಡಿಶೀಟರ್‌ಗಳ ಮನೆ ಮೇಲೆ ದಾಳಿ

h13-roudy
Published on

ಹುಬ್ಬಳ್ಳಿ: ಹು-ಧಾ ಪೊಲೀಸ್ ಆಯುಕ್ತಾಲಯದ ವಿವಿಧ ಠಾಣೆ ವ್ಯಾಪ್ತಿಯ ರೌಡಿಶೀಟರ್‌ಗಳ ಮನೆಗಳ ಮೇಲೆ ಭಾನುವಾರ ಪೊಲೀಸರು ದಾಳಿ ನಡೆಸಿ ಪರಿಶೀಲಿಸಿದ್ದಾರೆ.

1158 ರೌಡಿಶೀಟರ್‌ಗಳ ಮನೆಗಳನ್ನು ಪರಿಶೀಲನೆ ನಡೆಸಿದ್ದು, ದಾಳಿ ವೇಳೆ 80 ಮೊಬೈಲ್ ಫೋನ್, 14 ದ್ವಿಚಕ್ರ ವಾಹನ ಮತ್ತು 2 ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಅಲ್ಲದೇ ಆಯಾ ಠಾಣೆಗಳ ಮುಂದೆ ರೌಡಿಶೀಟರ್‌ಗಳ ಪರೇಡ್ ನಡೆಸಲಾಗಿದೆ. 737 ರೌಡಿಶೀಟರ್, 20 ಡ್ರಗ್ ಪೆಡ್ಲರ್‌ಗಳು, 227 ಮಾದಕ ವ್ಯಸನಿಗಳು, 72 ಎಂಒಬಿಗಳು ಸೇರಿದಂತೆ ಒಟ್ಟು 1056 ರೌಡಿಶೀಟರ್‌ಗಳು ಪರೇಡ್‌ನಲ್ಲಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net