ರೌಡಿಶೀಟರ್ ಗಡಿಪಾರು

deportation
Published on

ಹುಬ್ಬಳ್ಳಿ: ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿದ್ದ ನವನಗರ ಕೆಎಚ್‌ಬಿ ಕಾಲನಿ ನಿವಾಸಿ ರೌಡಿಶೀಟರ್ ಇರ್ಫಾನ್ ಮಕಬೂಲ ಹವಾಲ್ದಾರ (37) ಎಂಬಾತನನ್ನು 6 ತಿಂಗಳ ಅವಧಿಗೆ ಚಿತ್ರದುರ್ಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.
ಹುಬ್ಬಳ್ಳಿಯ ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಹಲವಾರು ಪ್ರಕರಣಗಳು ದಾಖಲಾಗಿದ್ದು, ಈತನ ಮೇಲೆ ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಸಹ ತೆರೆಯಲಾಗಿತ್ತು. ಆದರೂ ತನ್ನ ವರ್ತನೆ ಸುಧಾರಿಸಿಕೊಳ್ಳದೇ ವಿನಾಕಾರಣ ಸಾರ್ವಜನಿಕರ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕುವಂತಹ ಕಾನೂನು ಬಾಹಿರ ಚಟುವಟಿಕೆ ಮುಂದುವರಿಸಿದ್ದ. ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಮತ್ತೆ ಅಪರಾಧಿಕ ಚಟುವಟಿಕೆ ಮಾಡುವ ಸಾಧ್ಯತೆ ಇರುವುದರಿಂದ ಗಡಿಪಾರು ಮಾಡಿ ಹು-ಧಾ ಪೊಲೀಸ್ ಆಯುಕ್ತಾಲಯ ಆದೇಶ ಹೊರಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net