ರೌಡಿಶೀಟರ್ ಕೋಡಿಕೆರೆ ಲೋಕೇಶ್ ಮತ್ತೆ ಗಡಿಪಾರು

arrested
Published on


ಮಂಗಳೂರು: ದ.ಕ ಜಿಲ್ಲೆಯಿಂದ ಗಡಿಪಾರಾಗಿದ್ದ ರೌಡಿಶೀಟರ್ ಕೋಡಿಕೆರೆ ಲೋಕೇಶ್ ಯಾನೆ ಲೋಕುನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.


ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸುವ ಸಾಧ್ಯತೆ ಇರುವುದರಿಂದ ಈತನನ್ನು ಶಿವಮೊಗ್ಗ ಜಿಲ್ಲೆಗೆ ಗಡಿಪಾರು ಮಾಡಿ ಈತನ ಮೇಲೆ ನಿಗಾ ವಹಿಸಲಾಗುತ್ತಿತ್ತು. ಈತ ಗಡಿಪಾರು ಮಾಡಲಾದ ಶಿವಮೊಗ್ಗ ಜಿಲ್ಲೆಯಲ್ಲಿ ಇಲ್ಲದಿರುವುದು ಕಂಡು ಬಂದಿದ್ದು ಆತನ ಪತ್ತೆಗೆ ಪೊಲೀಸ್ ತಂಡ ರಚಿಸಲಾಗಿತ್ತು. ಆತನ ಚಲನವಲನ ಪರಿಶೀಲಿಸಿದಾಗ ಆತ ಬೆಳ್ತಂಗಡಿ ಪರಿಸರದಲ್ಲಿ ಇರುವುದು ಕಂಡು ಬಂದಿದೆ.

ಶುಕ್ರವಾರ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಬೇರೆ ಜಿಲ್ಲೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಮಂಗಳೂರು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶು ಕುಮಾರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net